ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಾಮನಗರ: ರೈತರಿಂದ ರಾಗಿ ಖರೀದಿ ಪ್ರಕ್ರಿಯೆ ಆರಂಭ

Published 14 ಮಾರ್ಚ್ 2024, 6:40 IST
Last Updated 14 ಮಾರ್ಚ್ 2024, 6:40 IST
ಅಕ್ಷರ ಗಾತ್ರ

ರಾಮನಗರ: ಜಿಲ್ಲೆಯಲ್ಲಿ 2023-24ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ (ಎಂ.ಎಸ್.ಪಿ) ಜಿಲ್ಲೆಯ ರೈತರಿಂದ ರಾಗಿ ಖರೀದಿ ಪ್ರಕ್ರಿಯೆಯು ಆರಂಭಗೊಂಡಿದೆ. ಈಗಾಗಲೇ ಚನ್ನಪಟ್ಟಣ, ಕನಕಪುರ, ಮಾಗಡಿ ಹಾಗೂ ರಾಮನಗರ ತಾಲ್ಲೂಕುಗಳಲ್ಲಿ ಖರೀದಿ ಕೇಂದ್ರ ತೆರೆಯಲಾಗಿದೆ.

ರಾಗಿ ಖರೀದಿ ಕೇಂದ್ರಗಳಲ್ಲಿ ದಲ್ಲಾಳಿಗಳಿಗೆ ಅವಕಾಶವಿರುವುದಿಲ್ಲ, ಖರೀದಿ ಕೇಂದ್ರಗಳಲ್ಲಿ ನೋಂದಾಯಿಸಿಕೊಂಡ ರೈತರು ಉತ್ತಮ ಗುಣಮಟ್ಟದ ರಾಗಿಯನ್ನು ಮಾತ್ರ ನೀಡಬೇಕು. ಖರೀದಿ ಕೇಂದ್ರದ ಅಧಿಕಾರಿಗಳು ಮತ್ತು ಗ್ರೇಡರ್ ಗಳು ಗುಣಮಟ್ಟದ ರಾಗಿಯನ್ನು ಮಾತ್ರ ರೈತರಿಂದ ಖರೀದಿಸಬೇಕು.

ಖರೀದಿಗೆ ಸಂಬಂಧಿಸಿದಂತೆ ರೈತರು ಯಾವುದೇ ದೂರು ಅಥವಾ ಸಮಸ್ಯೆಗಳಿದ್ದಲ್ಲಿ ತಾಲ್ಲೂಕಿನ ತಹಶೀಲ್ದಾರ್, ಆಹಾರ ಶಿರಸ್ತೇದಾರರು ಹಾಗೂ ಆಹಾರ ನಿರೀಕ್ಷಕರನ್ನು ಸಂಪರ್ಕಿಸಬಹುದಾಗಿದೆ. ಖರೀದಿ ಕೇಂದ್ರಗಳಲ್ಲಿ ರೈತರನ್ನು ಹೊರತುಪಡಿಸಿ ಇತರ ಜನ, ದಲ್ಲಾಳಿ ಹಾಗೂ ಮಧ್ಯವರ್ತಿಗಳು ಕಂಡುಬಂದಲ್ಲಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT