ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

20 ಸಾವಿರ ರೌಡಿಶೀಟರ್‌ಗಳಿಗೆ ಬಿಜೆಪಿ ಕೇಸರಿ ಶಾಲಿನ ಸ್ವಾಗತ: ರಾಮಲಿಂಗಾ ರೆಡ್ಡಿ

Published 4 ಜನವರಿ 2024, 15:49 IST
Last Updated 4 ಜನವರಿ 2024, 15:49 IST
ಅಕ್ಷರ ಗಾತ್ರ

ಚನ್ನಪಟ್ಟಣ: ‘ಬಿಜೆಪಿ ಆಡಳಿತ ಅವಧಿಯಲ್ಲಿ ಸುಮಾರು 20 ಸಾವಿರ ರೌಡಿಗಳ ಹೆಸರನ್ನು ರೌಡಿಶೀಟರ್‌ ಪಟ್ಟಿಯಿಂದ ತೆಗೆದು, ಕೇಸರಿ ಶಾಲು ಹಾಕಿ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡಿದ್ದರು. ಇದು ಬಿಜೆಪಿ ಕೊಟ್ಟ ಆಡಳಿತ ಮಾದರಿ’ ಎಂದು ಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ಟೀಕಿಸಿದ್ದಾರೆ.

ಕರಸೇವಕನ ಬಂಧನ ಖಂಡಿಸಿ ಬಿಜೆಪಿ ಹೋರಾಟ ಕುರಿತು ಗುರುವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ‘ಬಿಜೆಪಿಯವರಿಗೆ ಮಾಡಲು ಕೆಲಸವಿಲ್ಲ. ಬಂಧಿತ ಶ್ರೀಕಾಂತ ಪೂಜಾರಿ ಮೇಲೆ 16 ಪ್ರಕರಣಗಳಿದ್ದು, ಕೋರ್ಟ್ ಆದೇಶದ ಮೇರೆಗೆ ಆತನನ್ನು ಬಂಧಿಸಲಾಗಿದೆ. ಪೊಲೀಸರು ಕಾನೂನು ಪ್ರಕಾರವೇ ಕೆಲಸ ಮಾಡಿದ್ದಾರೆ’ ಎಂದು ಸಮರ್ಥಿಸಿಕೊಂಡರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT