ಶುಕ್ರವಾರ, ಸೆಪ್ಟೆಂಬರ್ 17, 2021
29 °C

ಚನ್ನಪಟ್ಟಣ: ರಾಮು ಮನೆಗೆ ಸಚಿವ ಯೋಗೇಶ್ವರ್‌ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚನ್ನಪಟ್ಟಣ: ಗುರುವಾರ ರಸ್ತೆ ಅಪಘಾತದಲ್ಲಿ ನಿಧನರಾದ ರಾಜ್ಯ ರೈತ ಸಂಘದ ಕಾರ್ಯಾಧ್ಯಕ್ಷ ಎಂ. ರಾಮು ಅವರ ಮೊಗೇನಹಳ್ಳಿಯ ಮನೆಗೆ ಶನಿವಾರ ಭೇಟಿ ನೀಡಿದ ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.

ಪ್ರೊ.ಎಂ. ನಂಜುಂಡಸ್ವಾಮಿ ಅವರ ಅನುಯಾಯಿಯಾಗಿ ರೈತರ ಸಮಸ್ಯೆಗಳಿಗೆ ಸದಾ ಸ್ಪಂದಿಸುತ್ತಾ ತಾಲ್ಲೂಕಿನ ರೈತರ ಕಣ್ಮಣಿಯಾಗಿದ್ದ ರಾಮು ಅವರ ನಿಧನ ತಾಲ್ಲೂಕಿಗೆ ತುಂಬಲಾರದ ನಷ್ಟ ಉಂಟು ಮಾಡಿದೆ. ರೈತಪರ ಹೋರಾಟಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡಿದ್ದರು. ಅವರು ಅಕಾಲಿಕವಾಗಿ ಮರಣ ಹೊಂದಿರುವುದು ನಿಜಕ್ಕೂ ದುರಂತ ಎಂದು ಯೋಗೇಶ್ವರ್‌ ವಿಷಾದಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು