ಗುರುವಾರ, 29 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾದೇಶ್ವರ ಬೆಟ್ಟಕ್ಕೆ ಶಾಸಕ ಬಾಲಕೃಷ್ಣ ಪಾದಯಾತ್ರೆ

Published 15 ಜನವರಿ 2024, 15:36 IST
Last Updated 15 ಜನವರಿ 2024, 15:36 IST
ಅಕ್ಷರ ಗಾತ್ರ

ಮಾಗಡಿ (ರಾಮನಗರ): ಶಾಸಕ ಎಚ್‌.ಸಿ. ಬಾಲಕೃಷ್ಣ ಅವರು, ಸೋಮವಾರ ಚಾಮರಾಜನಗರದ ಮಲೆ ಮಾದೇಶ್ವರ ಬೆಟ್ಟಕ್ಕೆ ಸಂಕ್ರಾಂತಿ ದಿನವಾದ ಸೋಮವಾರ ಪಾದಯಾತ್ರೆ ಕೈಗೊಂಡು ಹರಕೆ ತೀರಿಸಿದರು.

ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಬಾಲಕೃಷ್ಣ ಅವರ ಗೆಲುವಿಗಾಗಿ ಕಾರ್ಯಕರ್ತರು ಹರಕೆ ಹೊತ್ತಿದ್ದರು. ಅದರಂತೆ, ಶಾಸಕರು, ಪಾದಯಾತ್ರೆ ಮಾಡಿ ಮಾದೇಶ್ವರನ ದರ್ಶನ ಪಡೆದು ಹರಕೆ ತೀರಿಸಿದ್ದಾರೆ.

‘ಚುನಾವಣೆಯಲ್ಲಿ ನಾನು ಗೆದ್ದರೆ, ಮಾದೇಶ್ವರನ ಸನ್ನಿಧಿಗೆ ಪಾದಯಾತ್ರೆ ಕೈಗೊಳ್ಳುವುದಾಗಿ ಬಿಡದಿ ಹೋಬಳಿಯ ಮುಖಂಡರು ಹಾಗೂ ಕಾರ್ಯಕರ್ತರು ಹರಕೆ ಹೊತ್ತಿದ್ದರು. ಅದರಂತೆ, ಇಂದು ಅಲ್ಲಿನ ಮುಖಂಡರೊಂದಿಗೆ ಸಂಕ್ರಾಂತಿಯಂದು ಪಾದಯಾತ್ರೆ ಕೈಗೊಂಡು, ದೇವರ ದರ್ಶನ ಪಡೆದಿದ್ದೇನೆ. ರಾಜ್ಯದಲ್ಲಿ ಮಳೆ–ಬೆಳೆ ಚನ್ನಾಗಿ ಬಂದು, ರಾಜ್ಯ ಸುಭಿಕ್ಷವಾಗಿರಲಿ ಎಂದು ದೇವರಲ್ಲಿ ಬೇಡಿಕೊಂಡಿದ್ದೇನೆ’ ಎಂದು ದೇವರ ದರ್ಶನದ ಬಳಿಕ ಶಾಸಕ ಬಾಲಕೃಷ್ಣ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT