ರಾಮನಗರ: ಹಿರಿಯರು ತಮ್ಮ ಜೀವನಾನುಭವಗಳ ಮೂಲಕ ಇಂದಿನ ಸಮಾಜಕ್ಕೆ ಉತ್ತಮ ಸಲಹೆ ಹಾಗೂ ಮಾರ್ಗದರ್ಶನ ನೀಡುವುದು ಅವಶ್ಯಕ ಎಂದು ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಅಭಿಪ್ರಾಯಪಟ್ಟರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಗ್ರಾಮೀಣ ಪುನರ್ವಸತಿ ಯೋಜನೆಯ ಕಾರ್ಯಕರ್ತರು ಹಾಗೂ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಏರ್ಪಡಿಸಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಇಂದಿನ ಆಧುನಿಕ ಜಗತ್ತಿನಲ್ಲಿ ತಂತ್ರಜ್ಞಾನ ಬೆಳೆಯುತ್ತಿದ್ದಂತೆ ಮಾನವೀಯ ಮೌಲ್ಯಗಳು ಕಡಿಮೆಯಾಗುತ್ತಿವೆ. ಹಿರಿಯ ನಾಗರೀಕರ ಮೇಲೆ ಕೌಟುಂಬಿಕ ದೌರ್ಜನ್ಯಗಳು ಹೆಚ್ಚಾಗುತ್ತಿವೆ. ಇದಕ್ಕೆ ಮಾನವೀಯ ಮೌಲ್ಯಗಳ ಕೊರತೆಯೇ ಕಾರಣ. ಮಕ್ಕಳಲ್ಲಿ ನೈತಿಕ ಶಿಕ್ಷಣದ ಕೊರತೆಯು ಎದ್ದು ಕಾಣಿಸುತ್ತಿದೆ. ನೈತಿಕ ಮೌಲ್ಯಗಳನ್ನು ಮಕ್ಕಳಲ್ಲಿ ಬೆಳೆಸುವ ಪ್ರವೃತ್ತಿ ಹೆಚ್ಚಾಗಬೇಕು. ಆಧುನಿಕತೆಯ ಅಭಿವೃದ್ಧಿಗೆ ತಕ್ಕಂತೆ ಮಾನವೀಯ ಮೌಲ್ಯಗಳ ವೃದ್ಧಿಯೂ ಅವಶ್ಯಕವಾಗಿದೆ ಎಂದರು.

ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ.ಎನ್. ನಟರಾಜ್ ಗಾಣಕಲ್ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರವು ಹಿರಿಯ ನಾಗರೀಕರಿಗಾಗಿ ಬಸ್ಸಿನಲ್ಲಿ ಪ್ರಯಾಣಿಸಲು ಗುರುತಿನ ಚೀಟಿ, ಪಿಂಚಣಿ ಯೋಜನೆ, ಆರೋಗ್ಯ ಶಿಬಿರಗಳು ಸೇರಿದಂತೆ ಅನೇಕ ಯೋಜನೆಗಳನ್ನು ಮತ್ತು ಸೌಲಭ್ಯಗಳನ್ನು ನೀಡುತ್ತಿದೆ. ಹಿರಿಯ ನಾಗರೀಕರು ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಕಲ್ಯಾಣ ಅಧಿಕಾರಿ ಕೆ.ವಿ. ಜ್ಯೋತಿ ಮಾತನಾಡಿ, ಹಿರಿಯ ನಾಗರೀಕರಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಹಾಗೂ ಇತರೆ ಮಾಹಿತಿಗಳನ್ನು ಪಡೆಯಲು 1090 ಸಹಾಯವಾಣಿಯನ್ನು ಸಂಪರ್ಕಿಸಬಹುದು. ಜಿಲ್ಲೆಯಲ್ಲಿ ಈಗಾಗಲೇ ದೂರವಾಣಿ ಮುಖಾಂತರ 8,593 ಕರೆಗಳು ಬಂದಿವೆ ಎಂದು ತಿಳಿಸಿದರು.

ದಿನಾಚರಣೆಯ ಅಂಗವಾಗಿ ಏರ್ಪಡಿಸಿದ್ದ ವಿವಿಧ ಕ್ರೀಡೆಗಳಲ್ಲಿ ಸ್ಪರ್ಧಿಸಿ ವಿಜೇತರಾದ ಹಿರಿಯ ನಾಗರಿಕರಿಗೆ ಬಹುಮಾನ ವಿತರಿಸಲಾಯಿತು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಎಸ್.ಸಿ. ಪದ್ಮರಾಜ್, ಜಿ.ಪಂ. ಸಹಾಯಕ ಕಾರ್ಯದರ್ಶಿ ಶಿವಕುಮಾರ್, ಜಿಲ್ಲಾ ನಿರೂಪಣಾಧಿಕಾರಿ ಡಿ.ಆರ್. ಪ್ರಸನ್ನ ಕುಮಾರ್, ಸಾಹಿತಿ ಕೂ.ಗಿ. ಗಿರಿಯಪ್ಪ, ಸಮಾಜ ಸೇವಕಿ ಜಯಮ್ಮ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಹಿರಿಯ ನಾಗರೀಕರು ಭಾಗವಹಿಸಿದ್ದರು.

ವಾಕಿಂಗ್ ಪಾರ್ಕ್ ನಿರ್ಮಾಣಕ್ಕೆ ಯೋಜನೆ:

ಜಿಲ್ಲೆಯಲ್ಲಿ ಹಿರಿಯ ನಾಗರೀಕರು ಹಾಗೂ ಮಕ್ಕಳ ಅನುಕೂಲಕ್ಕಾಗಿ ಅರ್ಕಾವತಿ ನದಿಯ ಎಡ ಮತ್ತು ಬಲ ದಂಡೆಯ ಸುಮಾರು ಒಂದೂವರೆ ಕಿ.ಮೀ ವ್ಯಾಪ್ತಿಯಲ್ಲಿ ರೂ. 157 ಕೋಟಿ ವೆಚ್ಚದಲ್ಲಿ ವಾಕಿಂಗ್ ಪಾರ್ಕ್ ನಿರ್ಮಿಸಲು ಯೋಜನೆಯನ್ನು ರೂಪಿಸಲಾಗಿದೆ ಎಂದು ಶಾಸಕ ಇಕ್ಬಾಲ್ ಹುಸೇನ್ ತಿಳಿಸಿದರು.

ಜಿಲ್ಲಾ ಕ್ರೀಡಾಂಗಣವನ್ನು ರೂ. 20 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲು ತೀರ್ಮಾನಿಸಲಾಗಿದೆ, ಅಲ್ಲಿ ಪಾರ್ಕಿಂಗ್ ವ್ಯವಸ್ಥೆ, ಡ್ರೆಸ್ಸಿಂಗ್ ರೂಮ್, ವ್ಯಾಯಾಮ ಶಾಲೆ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಎಂಟು ಸಾವಿರ ಮನೆಗಳ ನಿರ್ಮಾಣಕ್ಕೆ ಈಗಾಗಲೇ ಜಮೀನನ್ನು ಗುರುತಿಸಲಾಗಿದೆ. ಇದರಿಂದ ಮನೆ ಇಲ್ಲದ ಬಡ ಜನರಿಗೆ ಮನೆಯನ್ನು ಒದಗಿಸಲಾಗುತ್ತದೆ ಎಂದರು.

ಜಿಲ್ಲೆಯಲ್ಲಿ ಕನ್ನಡ ಭವನ ಹಾಗೂ ಹಿರಿಯರಿಗಾಗಿ ಒಂದು ಸಮುದಾಯ ಭವನ ನಿರ್ಮಿಸಲು ಹಲವು ಮನವಿಗಳು ಬಂದಿದ್ದವು. ಅವುಗಳ ನಿರ್ಮಾಣಕ್ಕೆ ನಿರ್ದಿಷ್ಟವಾದ ಜಮೀನನ್ನು ಗುರುತಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.