ಕನಕಪುರ: ಕ್ಷೇತ್ರ ವ್ಯಾಪ್ತಿಯಲ್ಲಿ ಪೂರ್ಣಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ನೂತನ ಕಾಮಗಾರಿಗಳಿಗೆ ಕೊರೊನಾ ಸಮಸ್ಯೆಯಿಂದ ಚಾಲನೆ ನೀಡಲು ಸಾಧ್ಯವಾಗಿರಲಿಲ್ಲ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ತಿಳಿಸಿದರು.

ತಾಲ್ಲೂಕಿನ ಕೊಳ್ಳಿಗನಹಳ್ಳಿ ಗ್ರಾಮ ಪಂಚಾಯಿತಿಯ ಹುಳುಗೊಂಡನಹಳ್ಳಿ ಮತ್ತು ಯರೇಹಳ್ಳಿ ಗ್ರಾಮದಲ್ಲಿ ₹7 ಕೋಟಿ ವೆಚ್ಚದಲ್ಲಿ ಸೇತುವೆ ನಿರ್ಮಾಣ ಕಾಮಗಾರಿ ಹಾಗೂ ಮರಳವಾಡಿ ಹೋಬಳಿ ಯಲಚವಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಲ್ಲಕನಕುಪ್ಪೆ ಸರ್ಕಾರಿ ಆಸ್ಪತ್ರೆ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದರು.

ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ಈ ಭಾಗದಲ್ಲಿ ಅಭಿವೃದ್ಧಿಗೆ ಸಾಕಷ್ಟು ಒತ್ತು ಕೊಟ್ಟು ಕೆಲಸ ಮಾಡಿದ್ದಾರೆ. ಅವುಗಳಲ್ಲಿ ಕೆಲವು ಕಾಮಗಾರಿಗಳು ಪೂರ್ಣಗೊಂಡಿದ್ದವು. ಮತ್ತೆ ಕೆಲವು ಪ್ರಾರಂಭವಾಗಬೇಕಿದೆ. ಅಧಿಕಾರಿಗಳ ಜತೆ ಮಾತನಾಡಿ ಅಪೂರ್ಣಗೊಂಡಿರುವ ಕೆಲಸಗಳನ್ನು ತ್ವರಿತವಾಗಿ ಮಾಡಿಸಲಾಗುವುದು ಎಂದರು.

ಕಲ್ಲನಕುಪ್ಪೆ ಭಾಗದಲ್ಲಿ 30ಕ್ಕೂ ಹೆಚ್ಚು ಹಳ್ಳಿಗಳಿವೆ. ಈ ಭಾಗಕ್ಕೆ ಆಸ್ಪತ್ರೆ ಅವಶ್ಯವಿದೆ ಎಂದು ಸ್ಥಳೀಯ ಮುಖಂಡರು ಒತ್ತಾಯಿಸಿದ್ದರು. ಅದರಂತೆ ಸುಸಜ್ಜಿತವಾದ ಆಸ್ಪತ್ರೆ ನಿರ್ಮಾಣವಾಗಿದೆ. ಈ ಭಾಗದ ಜನರು ಇದರ ಉಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು.

ಪಡುವಣಗೆರೆ ಮಾರ್ಗದ ರಸ್ತೆ ಅಭಿವೃದ್ಧಿಗೆ ಸ್ಥಳೀಯರು ಮನವಿ ಮಾಡಿದರು. ಮರಳವಾಡಿ ಮತ್ತು ಹಾರೋಹಳ್ಳಿ ಹೋಬಳಿಯಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಇದುವರೆಗೂ ಸಾಗುವಳಿ ಹಕ್ಕುಪತ್ರ ಬಂದಿಲ್ಲ ಎಂದು ಇದೇ ಸಂದರ್ಭದಲ್ಲಿ ಒತ್ತಾಯಿಸಲಾಯಿತು. ಅಧಿಕಾರಿಗಳೊಂದಿಗೆ ಮಾತನಾಡಿ ಹಕ್ಕುಪತ್ರ ನೀಡುವ ಬಗ್ಗೆ ಭರವಸೆ ನೀಡಿದರು.

ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ಎನ್.ನಾಗರಾಜು, ಮಾಜಿ ಸದಸ್ಯ ಡಿ.ಎಸ್.ಭುಜಂಗಯ್ಯ, ಜೆಡಿಎಸ್ ಜಿಲ್ಲಾ ಘಟಕದ ಉಪಾಧ್ಯಕ್ಷ ರಾಮಕೃಷ್ಣ, ತಾಲ್ಲೂಕು ಪಂಚಾಯಿತಿ ಸದಸ್ಯ ಕೆ.ಎನ್.ರಾಮು, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಕೆ.ಎನ್.ಲಕ್ಷ್ಮಣ್, ಅಬ್ದುಲ್ಲ, ಮುಖಂಡರಾದ ಮಲ್ಲಪ್ಪ, ಸೋಮು, ಪುರುಷೋತ್ತಮ್, ಪ್ರದೀಪ್ಕುಮಾರ್, ಸಿದ್ದರಾಜು, ನಾಗೇಶ್, ಭೀಮಣ್ಣ, ವೆಂಕಟಪ್ಪ, ತಮ್ಮಯಣ್ಣ, ಬಸವರಾಜು, ಜೈರಾಮು, ನರಸಿಂಹಯ್ಯ, ಪರಮೇಶ್, ರಹಮತ್, ಅರುಣ್, ರಾಜೇ ಅರಸ್, ಪ್ರದೀಪ.ಕೆ.ಸಿ, ಕಿರಣ್, ಮಾದೇವ, ಮಹೇಶ್, ಗುಂಡ, ದಾಸೇಗೌಡ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.