ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುವತಿ ಜತೆ ಶಾಸಕ ಸಂಭಾಷಣೆ ವಿಡಿಯೊ: ಅಪರಿಚಿತರ ವಿರುದ್ಧ ಎಫ್‌ಐಆರ್

ಠಾಣೆಗೆ ತೆರಳಿ ದೂರು ನೀಡಿದ ಯುವತಿ
Published 1 ಮೇ 2024, 22:27 IST
Last Updated 1 ಮೇ 2024, 22:27 IST
ಅಕ್ಷರ ಗಾತ್ರ

ರಾಮನಗರ: ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ರಾಮನಗರದ ಕಾಂಗ್ರೆಸ್ ಶಾಸಕ ಎಚ್‌.ಎ.ಇಕ್ಬಾಲ್ ಹುಸೇನ್ ಮತ್ತು ಯುವತಿ ನಡುವಿನ ಸಂಭಾಷಣೆಯ ವಿಡಿಯೊಗೆ ಸಂಬಂಧಿಸಿದಂತೆ ಬುಧವಾರ ನಗರದ ಸಿ.ಇ.ಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಂಗ್ರೆಸ್ ಕಾರ್ಯಕರ್ತೆಯೂ ಆಗಿರುವ 25 ವರ್ಷದ ಯುವತಿಯೇ ಖುದ್ದಾಗಿ ಠಾಣೆಗೆ ಬಂದು ದೂರು ನೀಡಿದ್ದಾರೆ. ಅಪರಿಚಿತರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಶಾಸಕ ಇಕ್ಬಾಲ್ ಹುಸೇನ್ ಮತ್ತು ನನ್ನ ನಡುವಿನ ಸಂಬಂಧ ತಂದೆ, ಮಗಳ ಸಂಬಂಧವಾಗಿದೆ. ನನ್ನ ಜೊತೆಯಾಗಲಿ ಅಥವಾ ಬೇರೆಯವರ ಜೊತೆಯಾಗಲಿ ಅವರು ಅಸಭ್ಯವಾಗಿ ವರ್ತಿಸಿಲ್ಲ’ ಎಂದು ಯುವತಿ ದೂರಿನಲ್ಲಿ ಹೇಳಿದ್ದಾರೆ. 

‘ನಾನು ಶಾಸಕರೊಂದಿಗೆ ವಾಟ್ಸ್‌ಆ್ಯಪ್ ವಿಡಿಯೊ ಕಾಲ್‌ನಲ್ಲಿ ಮಾತನಾಡಿರುವಂತೆ ಅಶ್ಲೀಲ ವಿಡಿಯೊ ಸೃಷ್ಟಿಸಿರುವ ತಮ್ಮಣ್ಣಗೌಡ ಗುಂಡ್ಕಲ್ ಎಂಬುವರು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಅದನ್ನು ಹಂಚಿಕೊಂಡು ನನ್ನ ಮಾನಕ್ಕೆ ಧಕ್ಕೆ ತಂದಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT