ಮಂಗಳವಾರ, 18 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿ.ಕೆ.ಶಿವಕುಮಾರ್ ಸಿ.ಎಂ ಆಗಲಿ; ಪುಟ್ಟಣ್ಣ

‘ಹಿತ್ತಲ ಬಾಗಿಲಿನಿಂದ ಬಂದು ಯಾರ‍್ಯಾರೊ ಸಿ.ಎಂ ಆಗಿದ್ದಾರೆ...’
Published 26 ಮೇ 2024, 0:35 IST
Last Updated 26 ಮೇ 2024, 0:35 IST
ಅಕ್ಷರ ಗಾತ್ರ

ಚನ್ನಪಟ್ಟಣ: ‘ಹಿತ್ತಲ ಬಾಗಿಲಿನಿಂದ ಯಾರ‍್ಯಾರೊ ಬಂದು ಸಿ.ಎಂ ಆಗಿದ್ದಾರೆ. ಅಂತಹದ್ದರಲ್ಲಿ ಪಕ್ಷಕ್ಕಾಗಿ ಕಷ್ಟಪಟ್ಟಿರುವ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಬೇಕು. ನಾಳೆಯೇ ಆಗಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ. ಈ ವಿಷಯದಲ್ಲಿ ನಾನು ಸದಾ ಅವರ ಪರವಿದ್ದೇನೆ’ ಎಂದು ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಹೇಳಿದರು.

ಬೆಂಗಳೂರು ಪದವೀಧರರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಮೋಜಿಗೌಡ ಪರವಾಗಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಶಿವಕುಮಾರ್ ಅವರಿಗೆ ಶೇ ನೂರರಷ್ಟು ಸಿ.ಎಂ ಅವಕಾಶವಿದೆ. ಅವರು ಆಗಬೇಕು ಕೂಡ’ ಎಂದು ಅಭಿಪ್ರಾಯಪಟ್ಟರು.

‘ಯಾರ‍್ಯಾರನ್ನೊ ಸಿ.ಎಂ ಮಾಡಿದ್ದೇವೆ. ನಮ್ಮ ಜಿಲ್ಲೆಯ ಮಗ, ಅದರಲ್ಲೂ ನಮ್ಮವರಾದ ಶಿವಕುಮಾರ್ ಮುಖ್ಯಮಂತ್ರಿಯಾಗಬೇಕು ಎಂಬುದು ನನ್ನ ವೈಯಕ್ತಿಕ ಆಸೆ. ನನ್ನ ಅಥವಾ ಐದಾರು ಮಂದಿಯ ತೀರ್ಮಾನದಿಂದ ಶಿವಕುಮಾರ್ ಮುಖ್ಯಮಂತ್ರಿ ಆಗುವುದಿಲ್ಲ. ಈ ಕುರಿತು ನಿರ್ಧಾರ ಪಕ್ಷ ಹಾಗೂ ಹೈಕಮಾಂಡ್‌ಗೆ ಬಿಟ್ಟಿದ್ದು’ ಎಂದರು.

‘ಈ ಹೇಳಿಕೆ ಸಿದ್ದರಾಮಯ್ಯ ಅವರನ್ನು ಉದ್ದೇಶಿಸಿದೆಯೇ’ ಎಂಬ ಪ್ರಶ್ನೆಗೆ, ‘ಸಿದ್ದರಾಮಯ್ಯ ಅವರು ಹೋರಾಟದ ಮೂಲಕ ಮುಖ್ಯಮಂತ್ರಿಯಾಗಿದ್ದಾರೆ. ಉಳಿದ ಎಷ್ಟೋ ಮಂದಿ ಹಿತ್ತಲ ಬಾಗಿಲಿನಿಂದ ಬಂದು ಆ ಹುದ್ದೆಗೇರಿದ್ದಾರೆ’ ಎಂದು ಸಮಜಾಯಿಷಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT