ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಮೀಣ ಯುವಜನರಿಗೆ ಮೊಬೈಲ್ ರಿಪೇರಿ ತರಬೇತಿ

Published 25 ಏಪ್ರಿಲ್ 2024, 16:06 IST
Last Updated 25 ಏಪ್ರಿಲ್ 2024, 16:06 IST
ಅಕ್ಷರ ಗಾತ್ರ

ರಾಮನಗರ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯಿಂದ ಉಚಿತವಾಗಿ ಮೊಬೈಲ್ ರಿಪೇರಿ ತರಬೇತಿ ಹಮ್ಮಿಕೊಳ್ಳಲಾಗಿದೆ. 30 ದಿನಗಳ ಉಚಿತ ತರಬೇತಿಗೆ ಮೇ 8ರಂದು ನೇರ ಸಂದರ್ಶನ ನಡೆಯಲಿದೆ. ಗ್ರಾಮೀಣ ಭಾಗದ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಆಸಕ್ತರು 18ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್‌ ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ತರಬೇತಿ ವಸತಿ ಸಹಿತವಾಗಿದ್ದು, ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು. ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರ ವಿತರಿಸಲಾಗುವುದು.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9740982585, 9380162042, 9113880324 ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕ ರವಿಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT