ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬ್ಯಾಂಕ್ ಖಾತೆಯಲ್ಲಿದ್ದ ₹1.94 ಲಕ್ಷ ಮಾಯ!

Published 24 ಜೂನ್ 2024, 7:51 IST
Last Updated 24 ಜೂನ್ 2024, 7:51 IST
ಅಕ್ಷರ ಗಾತ್ರ

ರಾಮನಗರ: ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುವ ಕಾರ್ಮಿಕರೊಬ್ಬರ ಬ್ಯಾಂಕ್ ಖಾತೆಯಲ್ಲಿದ್ದ ₹1.94ಲಕ್ಷ ಹಣ ಬೇರೊಂದು ಖಾತೆಗೆ ವರ್ಗಾವಣೆ ಮಾಡಿಕೊಂಡಿರುವ ಘಟನೆ ಬಿಡದಿ ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ನಡೆದಿದೆ.

ಸಂಗಬಸವನದೊಡ್ಡಿ ಕಾರ್ಮಿಕ ರೇವಣ್ಣ ಸಿದ್ದಪ್ಪ ಹಣ ಕಳೆದುಕೊಂಡವರು. ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ಖಾತೆ ಹೊಂದಿದ್ದರು. ಇವರ ಪೋನ್ ಪೇ ಏಕಾಏಕಿ ನಿಷ್ಕ್ರಿಯಗೊಂಡಿದೆ. ಬಳಿಕ ಎಟಿಎಂನಲ್ಲಿ ಹಣ ಡ್ರಾ ಮಾಡಲು ಹೋದಾಗ ಹಣ ಬಾರದೆ ಖಾತೆಯಲ್ಲಿ ಬ್ಯಾಲೆನ್ಸ್ ಇಲ್ಲ ಎಂಬ ರಶೀದಿ ಬಂದಿದೆ. ಇದರಿಂದ ಗಾಬರಿಗೊಂಡು ಬ್ಯಾಂಕ್‌ಗೆ ಹೋಗಿ ವಿಚಾರಿಸಿದಾಗ ಹಣ ಯುಪಿಐ ಮೂಲಕ ವರ್ಗಾವಣೆಯಾಗಿರುವುದು ಬೆಳಕಿಗೆ ಬಂದಿದೆ. ಬಿಡದಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT