ಕನಕಪುರ: ಶಿಕ್ಷಣ ಪೌಂಡೇಶನ್ ಮತ್ತು ಆರ್‌ಡಿಪಿಆರ್ ಸಹಯೋಗದೊಂದಿಗೆ ದೊಡ್ಡಾಲಹಳ್ಳಿ ಗ್ರಾಮಪಂಚಾಯಿತಿ ಗ್ರಂಥಾಲಯದಲ್ಲಿ ದ್ವಿತೀಯ ಪಿಯುಸಿ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ ಕೃತಕ ಬುದ್ಧಿಮತ್ತೆ (ಎಐ) ತರಬೇತಿ ಕಾರ್ಯಕ್ರಮ ಸೋಮವಾರ ನಡೆಯಿತು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಿವಲಿಂಗೇಗೌಡ ಮತ್ತು ಅರ್ಜುನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

‘ಸ್ಪರ್ಧಾತ್ಮಕ ಜಗತ್ತಿನಲ್ಲಿ ಶಿಕ್ಷಣ ಪಡೆದರೂ, ಉದ್ಯೋಗ ಪಡೆದು ಕೊಳ್ಳಬೇಕಾದರೆ ಶಿಕ್ಷಣದ ಜೊತೆಗೆ ಕೌಶ ಇರಬೇಕಿದೆ. ಇಂದಿನ ಯುವಕರಿಗೆ ಕೌಶಲ್ಯ ಇಲ್ಲದ ಕಾರಣ ಸವಾಲಾಗಿ ಪರಿಣಮಿಸಿದೆ. ಉದ್ಯೋಗಕ್ಕೆ ಸಂಬಂಧಿಸಿದ ಕೌಶಲ್ಯ ಆಧಾರಿತ ತರಬೇತಿ ನೀಡುವುದರಿಂದ ಗ್ರಾಮೀಣ ಭಾಗದ ಯುವಕರು ಮತ್ತು ಯುವತಿಯರಿಗೆ ಅನುಕೂಲವಾಗಲಿದೆ. ಇದನ್ನು ಸದ್ಬಳಕ್ಕೆ ಮಾಡಿಕೊಳ್ಳಬೇಕು’ ಎಂದರು.

ಪಿಯು ಕಾಲೇಜಿನ ಪ್ರಾಂಶುಪಾಲ ಭೈರಹನುಮಯ್ಯ ಮಾತನಾಡಿ, ‘ತಾಲ್ಲೂಕಿನ ಯುವ ಸಮುದಾಯಕ್ಕೆ ಅನುಕೂಲವಾಗಲಿ ಎಂದು ಕೌಶಲ ಆಧಾರಿತ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ಗ್ರಾಮೀಣ ಭಾಗದ ಯುವಕ– ಯುವತಿಯರುಶಿಬಿರದಲ್ಲಿ ಪಾಲ್ಗೊಂಡು ಇದರ ಪ್ರಯೋಜನ ಪಡೆದುಕೊಂಡು ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಗಬೇಕು’ ಎಂದು ಸಲಹೆ ನೀಡಿದರು.

ಶಿಕ್ಷಣ ಪೌಂಡೇಶನ್ ಜಿಲ್ಲಾ ಸಂಯೋಜಕ ರಾಜೇಶ್ ಮಾತನಾಡಿ, ‘ಇಂದಿನ ವಿದ್ಯಾರ್ಥಿಗಳು ಉತ್ತಮವಾದ ಭವಿಷ್ಯ ರೂಪಿಸಿಕೊಳ್ಳಬೇಕಾದರೆ ಶಿಕ್ಷಣದ ಜೊತೆಗೆ ಕೌಶಲವೂ ಇರಬೇಕಿದೆ’ ಎಂದರು.

‘ಸೋಮವಾರದಿಂದ ಗುರುವಾರದವರೆಗೂ ನಾಲ್ಕು ದಿನಗಳ ಕಾಲ ಈ ಕಾರ್ಯಕ್ರಮ ನಡೆಯಲಿದ್ದು ದೊಡ್ಡಾಲಹಳ್ಳಿ ಮತ್ತು ನಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದ್ವಿತೀಯ ಪಿಯುಸಿ ಮೇಲ್ಪಟ್ಟ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದು ಕೊಳ್ಳಬೇಕು’ ಎಂದು ತಿಳಿಸಿದರು.

ರಾಜ್ಯದಲ್ಲಿಯೆ ಕನಕಪುರ ತಾಲ್ಲೂಕಿನಲ್ಲಿ ಮೊದಲ ಪ್ರಾಯೋಗಿಕವಾಗಿ ಈ ಕಾರ್ಯಕ್ರಮವನ್ನು ಪ್ರಾರಂಭ ಮಾಡಲಾಗಿದೆ. ಇಲ್ಲಿ ಯಶಸ್ವಿಯಾದರೆ ರಾಜ್ಯದಾದ್ಯಂತ ಈ ಕಾರ್ಯಕ್ರಮ ವಿಸ್ತರಣೆಯಾಗಲಿದೆ ಎಂದು ಹೇಳಿದರು.

ಶಿಕ್ಷಣ ಪೌಂಡೇಶನ್ ತರಬೇತಿ ವ್ಯವಸ್ಥಾಪಕ ವಿಜಯೇಂದ್ರ ಕುಲಕರ್ಣಿ, ನಲ್ಲಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ ಶಿವರಾಜು, ಶಿಕ್ಷಣ ಪೌಂಡೇಶನ್ ಜಿಲ್ಲಾ ಸಂಯೋಜಕ ರಕ್ಷಿತ್, ಗ್ರಂಥಪಾಲಕರಾದ ಶಿವಪ್ಪ, ರಾಜೇಶ್ವರಿ, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.