ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚನ್ನಪಟ್ಟಣ: ಮದುವೆ ಊಟ ಸೇವಿಸಿ 100ಕ್ಕೂ ಹೆಚ್ಚು ಮಂದಿ ಅಸ್ವಸ್ಥ

Published 6 ಮೇ 2024, 0:18 IST
Last Updated 6 ಮೇ 2024, 0:18 IST
ಅಕ್ಷರ ಗಾತ್ರ

ಚನ್ನಪಟ್ಟಣ: ಪಟ್ಟಣದ ಸಾತನೂರು ವೃತ್ತದ ಬಳಿಯ ಟಿಪ್ಪು ನಗರದಲ್ಲಿ ಭಾನುವಾರ ರಾತ್ರಿ ಮದುವೆ ಕಾರ್ಯಕ್ರಮದಲ್ಲಿ ಊಟ ಸೇವಿಸಿ 100ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದಾರೆ.

ಅಸ್ವಸ್ಥರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆ, ಮಾಗಡಿ ಸರ್ಕಾರಿ ಆಸ್ಪತ್ರೆ, ರಾಮನಗರ ಜಿಲ್ಲಾಸ್ಪತ್ರೆ ಹಾಗೂ ಮಂಡ್ಯದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಥಮ ಚಿಕಿತ್ಸೆ ಜತೆಗೆ ಡ್ರಿಪ್ ಹಾಕಲಾಗಿದೆ. ಅಸ್ವಸ್ಥರಲ್ಲಿ ಮಕ್ಕಳೇ ಹೆಚ್ಚಾಗಿದ್ದು ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ 'ಪ್ರಜಾವಾಣಿ'ಗೆ ತಿಳಿಸಿದರು.

ಚನ್ನಪಟ್ಟಣದ ವಧು ಹಾಗೂ ಮಾಗಡಿಯ ವರನ ಮದುವೆ ಕಾರ್ಯಕ್ರಮ ಚನ್ನಪಟ್ಟಣದಲ್ಲಿ ನಡೆಯುತ್ತಿತ್ತು. ಮಧ್ಯಾಹ್ನ ಊಟದ ನಂತರ ಐಸ್ ಕ್ರೀಂ ಸೇವಿಸಿದ್ದರು. ಸಂಜೆ ಹೊತ್ತಿಗೆ ಆರೋಗ್ಯದಲ್ಲಿ ಏರುಪೇರಾಗಿ ಅಸ್ವಸ್ಥರಾಗಿದ್ದಾರೆ. ಕೂಡಲೇ ಅಸ್ವಸ್ಥರನ್ನು ‌ಮಾಗಡಿ ಮತ್ತು ಚನ್ನಪಟ್ಟಣ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಂಡ್ಯ ಮತ್ತು ರಾಮನಗರ ಜಿಲ್ಲಾಸ್ಪತ್ರೆಗೆ ನಾಲ್ಕೈದು ಮಂದಿಯನ್ನು ಕರೆದೊಯ್ಯಲು ಶಿಫಾರಸು ಮಾಡಲಾಗಿದೆ. ಮದುವೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ. ಆಹಾರ ಮತ್ತು ಐಸ್‌ ಕ್ರೀಂ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿದೆ. ವರದಿ ಬಂದ ಬಳಿಕ ಕಾರಣ ಗೊತ್ತಾಗಲಿದೆ ಎಂದು ಆರೋಗ್ಯಾಧಿಕಾರಿ ತಿಳಿಸಿದರು.

ಅಸ್ವಸ್ಥರಾಗಿರುವವರು ಚನ್ನಪಟ್ಟಣದ ಯಾರಬ್ ನಗರ ಮತ್ತು ಕೋಟೆ ನಿವಾಸಿಗಳಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT