ಮಾಗಡಿ: ಪಟ್ಟಣದ ಜ್ಯೋತಿನಗರದಲ್ಲಿ ಭಾನುವಾರ ರಾತ್ರಿ ಬಿಸಿ ನೀರು ಕಾಯಿಸುವ ಅನಿಲ ಗೀಸರ್ನ ವಿಷಕಾರಿ ಕಾರ್ಬನ್ ಮೊನಾಕ್ಸೈಡ್ ಸೋರಿಕೆಯಿಂದಾಗಿ ತಾಯಿ ಮತ್ತು ಮಗ ಮೃತಪಟ್ಟಿದ್ದಾರೆ.

ಶೋಭಾ(40) ಮತ್ತು ಅವರ ಪುತ್ರ ದಿಲೀಪ್ (17) ಮೃತರು.

ರಾತ್ರಿ ಏಳು ಗಂಟೆ ಸುಮಾರಿಗೆ ದಿಲೀಪ್ ಸ್ನಾನದ ಕೊಠಡಿಯಲ್ಲಿರುವ ಗೀಸರ್ ಸ್ವಿಚ್ ಆನ್ ಮಾಡಿಕೊಂಡು ಸ್ನಾನಕ್ಕೆ ತೆರಳಿದ್ದರು. ಆಗ, ಕಿಟಕಿ ಇಲ್ಲದ ಕೊಠಡಿಯನ್ನು ಆವರಿಸಿದ ಕಾರ್ಬನ್ ಮೊನಾಕ್ಸೈಡ್ನಿಂದಾಗಿ ದಿಲೀಪ್ ಪ್ರಜ್ಞೆ ತಪ್ಪಿ ಮೃತಪಟ್ಟಿದ್ದಾರೆ ಎಂದು ಮಾಗಡಿ ಠಾಣೆ ಪೊಲೀಸರು ಹೇಳಿದರು.

ಸ್ನಾನಕ್ಕೆ ಹೋದ ಮಗ ಎಷ್ಟೊತ್ತಾದರೂ ಬರಲಿಲ್ಲವಲ್ಲ ಎಂದು ತಾಯಿ ಶೋಭಾ ಅವರು, ಸ್ನಾನದ ಕೊಠಡಿ ಬಾಗಿಲು ತೆರೆದು ಒಳ ಹೋದಾಗ ಮಗ ಕೆಳಗೆ ಬಿದ್ದಿರುವುದನ್ನು ಗಮನಿಸಿದ್ದಾರೆ. ಆತನ ಸ್ಥಿತಿ ಕಂಡು ಗಾಬರಿಗೊಂಡು ಅವರು, ಮಗನನ್ನು ಹೊರಕ್ಕೆ ಕರೆತರಲು ಯತ್ನಿಸಿದ್ದಾರೆ. ಆದರೆ, ಅಷ್ಟೊತ್ತಿಗಾಗಲೇ ಅವರು ಸಹ ಅನಿಲ ಸೇವಿಸಿ ಪ್ರಜ್ಞೆ ತಪ್ಪಿ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ತಿಳಿಸಿದರು.

ಕಾರ್ಯ ನಿಮಿತ್ತ ಹೊರಗಡೆ ಹೋಗಿದ್ದ ಪುತ್ರಿ, ಒಂದು ತಾಸಿನ ಬಳಿಕ ತಾಯಿ ಮತ್ತು ಸಹೋದರನನ್ನು ಕಂಡು, ಸ್ಥಳೀಯರ ನೆರವಿನಿಂದ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಅಷ್ಟೊತ್ತಿಗಾಗಲೇ ಅವರಿಬ್ಬರು ಮೃತಪಟ್ಟಿರುವುದಾಗಿ ವೈದರು ಘೋಷಿಸಿದ್ದಾರೆ ಎಂದು ಪೊಲೀಸರು ಹೇಳಿದರು.

ದಿಲೀಪ್ ಅವರು ಮಾಗಡಿಯ ಬಿಜಿಎಸ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದರು. ಘಟನೆ ಕುರಿತು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸೋಮವಾರ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬದವರಿಗೆ ಶವ ಹಸ್ತಾಂತರ ಮಾಡಲಾಯಿತು ಎಂದು ಪೊಲೀಸರು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.