ಶುಕ್ರವಾರ, 23 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪ್ರೇರಣಾ ಕಾರ್ಯಾಗಾರ

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗಲು ಸಲಹೆ
Published 1 ಫೆಬ್ರುವರಿ 2024, 4:31 IST
Last Updated 1 ಫೆಬ್ರುವರಿ 2024, 4:31 IST
ಅಕ್ಷರ ಗಾತ್ರ

ಚನ್ನಪಟ್ಟಣ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಐಎಎಸ್ ಹಾಗೂ ಐಪಿಎಸ್‌ನಂತಹ ಪರೀಕ್ಷೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಸಾಧ್ಯವಿದೆ ಎಂದು ಡಯಟ್ ಉಪನ್ಯಾಸಕ ಸಿ. ರಾಜಶೇಖರ್ ಹೇಳಿದರು.

ನಗರದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್), ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ, ರಾಮನಗರ ಜಿಲ್ಲಾ ಹಾಗೂ ತಾಲ್ಲೂಕು ಘಟಕ, ಶಾಲೆಯ ರಾಷ್ಟ್ರೀಯ ಸೇವಾ ಯೋಜನೆಯಿಂದ ಶುಕ್ರವಾರ ಆಯೋಜಿಸಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪ್ರೇರಣಾ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಪ್ರಸ್ತುತ ಸಾಲಿನಲ್ಲಿ ಉತ್ತಮ ಫಲಿತಾಂಶ ಪಡೆಯಲು ನಿರಂತರ ಓದು, ಪೂರಕ ಅಭ್ಯಾಸ ಅವಶ್ಯಕತೆ ಇದೆ. ನಿತ್ಯ ಎಲ್ಲ ವಿಷಯಗಳಲ್ಲಿ ಕನಿಷ್ಠ ಎರಡು ಪ್ರಶ್ನೆಗಳಿಗೆ ಉತ್ತರ ಸಿದ್ಧಪಡಿಸಿಕೊಂಡು ಅಭ್ಯಾಸ ಮಾಡಿದರೂ ಉತ್ತಮ ಫಲಿತಾಂಶ ಪಡೆಯಬಹುದು. ಪ್ರಾಮಾಣಿಕ ಹಾಗೂ ನಿರಂತರ ಪ್ರಯತ್ನದಿಂದ ಉತ್ತಮ ಫಲಿತಾಂಶ ಸಾಧ್ಯ ಎಂದರು.

ಉಪನ್ಯಾಸಕ ಕೆ.ಪಿ. ಬಾಬು ಮಾತನಾಡಿ, ವಿದ್ಯಾರ್ಥಿಗಳು ಸಾಧನೆಯ ಹಾದಿಯಲ್ಲಿ ಶಿಸ್ತು, ಸಂಯಮ, ವಿಧೇಯತೆ, ಏಕಾಗ್ರತೆ, ಅಧ್ಯಯನ, ಅಧ್ಯಾಪನ, ವಿಷಯ ವೇಳಾಪಟ್ಟಿ, ಪುನರ್ ಮನನ ಹಾಗೂ ಶ್ರದ್ಧೆಯಿಂದ ವಿದ್ಯಾಭ್ಯಾಸ ಮಾಡುವುದನ್ನು ರೂಢಿಸಿಕೊಳ್ಳಬೇಕು. ಇದರಿಂದ ಸಾಧನೆಯ ಶಿಖರವನ್ನು ಸುಲಭವಾಗಿ ಏರಬಹುದು ಎಂದರು.

ಜಿಲ್ಲಾ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಟಿ.ಸ್ವಾಮಿ, ತಾಲ್ಲೂಕು ಶಾಖೆಯ ಅಧ್ಯಕ್ಷ ಬಿ.ಎಸ್. ರಾಮಣ್ಣ, ಕಾರ್ಯದರ್ಶಿ ವೇಣುಗೋಪಾಲ್, ಉಪ ಪ್ರಾಂಶುಪಾಲ ಕೆ. ವೀರಭದ್ರಯ್ಯ, ಶಿಕ್ಷಕರಾದ ಎನ್. ಕಾಡಯ್ಯ, ಬಿ.ಡಿ. ಲಕ್ಷಣಗೌಡ, ಪಿ.ವಸಂತ್ ಕುಮಾರ್, ವಿದ್ಯಾರ್ಥಿಗಳು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT