ಗುರುವಾರ , ಜುಲೈ 29, 2021
27 °C

ರಾಮನಗರ: ಪಿಪಿಇ ಕಿಟ್ ಧರಿಸಿ ಅಂತ್ಯಕ್ರಿಯೆಯಲ್ಲಿ ಭಾಗಿಯಾದ ಸಂಸದ ಸುರೇಶ್ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ಭಾನುವಾರ ಕನಕಪುರದ ದೇಗುಲ ಮಠದ ಪಕ್ಕದಲ್ಲಿರುವ ರುದ್ರಭೂಮಿಯಲ್ಲಿ ನಡೆದ ಕೋವಿಡ್ ಸೋಂಕಿತ ವ್ಯಕ್ತಿಯ ಅಂತ್ಯಕ್ರಿಯೆಯಲ್ಲಿ ಸಂಸದ ಡಿ.ಕೆ. ಸುರೇಶ್ ಪಾಲ್ಗೊಂಡರು. 

ಕನಕಪುರದ ಆಭರಣ ಮಳಿಗೆಯೊಂದರ ಮಾಲೀಕರೊಬ್ಬರು ಮೂರು ದಿನದ ಹಿಂದೆ ಕೋವಿಡ್ ಸೋಂಕಿಗೆ ತುತ್ತಾಗಿದ್ದರು. ನಂತರದಲ್ಲಿ  ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟರು. ಅವರ ಅಂತ್ಯಕ್ರಿಯೆಯಲ್ಲಿ ಕುಟುಂಬದವರೊಂದಿಗೆ ಸಂಸದ ಡಿ.ಕೆ. ಸುರೇಶ್ ಹಾಗೂ‌ ವಿಧಾನ ಪರಿಷತ್ ಸದಸ್ಯ ರವಿ ಪಿಪಿಇ ಕಿಟ್ ಧರಿಸಿ ಭಾಗಿಯಾದರು.

ಆರೋಗ್ಯ ಇಲಾಖೆ ಹಾಗೂ ನಗರಸಭೆ ಸಿಬ್ಬಂದಿ ಅಂತ್ಯಕ್ರಿಯೆ ನೆರವೇರಿಸಿದರು.

ಸುರೇಶ್ ಕಳೆದ ವಾರ ಪಿಪಿಇ ಕಿಟ್ ಧರಿಸಿ ರಾಮನಗರ ಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಅಹವಾಲು ಆಲಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು