ಬುಧವಾರ, 17 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾರ ಬದುಕಿಗೂ ವಿಷ ಹಾಕಿಲ್ಲ: ಡಿ.ಕೆ. ಸುರೇಶ್‌

Published 19 ಮಾರ್ಚ್ 2024, 23:36 IST
Last Updated 19 ಮಾರ್ಚ್ 2024, 23:36 IST
ಅಕ್ಷರ ಗಾತ್ರ

ಹಾರೋಹಳ್ಳಿ: ‘ನಾನು ಯಾರ ಬದುಕಿಗೂ ವಿಷ ಹಾಕುವವನಲ್ಲ. ಎಲ್ಲರಿಗೂ ಒಳ್ಳೆಯದನ್ನೇ ಬಯಸುತ್ತೇನೆ. ಆರೋಗ್ಯ ಚಿಕಿತ್ಸೆಗಾಗಿ ಹೋಗುತ್ತಿರುವ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಆದಷ್ಟು ಬೇಗ ಗುಣಮುಖರಾಗಿ ಬರಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ’ ಎಂದು ಸಂಸದ ಡಿ.ಕೆ. ಸುರೇಶ್ ಹೇಳಿದ್ದಾರೆ.

ಡಿ.ಕೆ. ಸುರೇಶ್ ತನ್ನ ಬದುಕಿಗೆ ವಿಷ ಹಾಕಿದ್ದಾರೆ ಎಂಬ ಕುಮಾರಸ್ವಾಮಿ ಹೇಳಿಕೆ ಕುರಿತು ಮಂಗಳವಾರ ಪ್ರತಿಕ್ರಿಯಿಸಿದ ಅವರು, ‘ನಾನು ಕ್ಷೇತ್ರದಲ್ಲಿ ಮಾಡಿರುವ ಕೆಲಸಗಳಿಗೆ ಮತದಾರರಿಂದ ಕೂಲಿ ಕೇಳುತ್ತಿದ್ದೇನೆ. ನಾನು ಯಾರ ಮೇಲೂ ಆರೋಪ ಮಾಡುತ್ತಿಲ್ಲ’ ಎಂದರು.

‘ನಾನು ಬಲವಂತವಾಗಿ ಬಿಜೆಪಿ, ಜೆಡಿಎಸ್ ನಾಯಕರಿಗೆ ಕಾಂಗ್ರೆಸ್ ಶಾಲು ಹಾಕುತ್ತಿದ್ದೇನೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ ಹೇಳಿದ್ದಾರೆ. ಯಾರಿಗೂ ಬಲವಂತ ಮಾಡುವ ಅಭ್ಯಾಸ ನನಗಿಲ್ಲ’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT