ಸೋಮವಾರ, 15 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೆಡಿಎಸ್ ಅಸ್ತಿತ್ವದಲ್ಲಿಲ್ಲವೆಂದು ನಿರ್ಧರಿಸಿದ ದೇವೇಗೌಡರ ಅಳಿಯ- ಡಿ.ಕೆ. ಸುರೇಶ್

ಬಿಜೆಪಿಯಿಂದ ಡಾ. ಮಂಜುನಾಥ್ ಸ್ಪರ್ಧೆಗೆ ಸಂಸದ ಡಿ.ಕೆ. ಸುರೇಶ್ ಲೇವಡಿ
Published 14 ಮಾರ್ಚ್ 2024, 16:18 IST
Last Updated 14 ಮಾರ್ಚ್ 2024, 16:18 IST
ಅಕ್ಷರ ಗಾತ್ರ

ಚನ್ನಪಟ್ಟಣ: ‘ದಕ್ಷಿಣ ರಾಜ್ಯಗಳ ಪಾಲು ಕೇಳಿದ ನನ್ನನ್ನು ಗುಂಡಿಕ್ಕಿ ಕೊಲ್ಲಬೇಕು ಎಂದವರು ತಮ್ಮ ಪುತ್ರನಿಗೆ ಟಿಕೆಟ್ ಸಿಗದೆ ಹತಾಶರಾಗಿ ಬಂಡಾಯದ ಮಾತನ್ನಾಡುತ್ತಿದ್ದಾರೆ. ಸಂವಿಧಾನ ಬದಲಾವಣೆ ಮಾಡಲು ಹೋದವರ ಕತೆ ಏನಾಗುತ್ತದೊ ಗೊತ್ತಿಲ್ಲ’ ಎಂದು ಸಂಸದ ಡಿ.ಕೆ. ಸುರೇಶ್ ಲೇವಡಿ ಮಾಡಿದ್ದಾರೆ. 

ಬುಧವಾರ ಬಿಡುಗಡೆಯಾದ ಬಿಜೆಪಿ ಎರಡನೇ ಪಟ್ಟಿ ಕುರಿತು ಪ್ರತಿಕ್ರಿಯಿಸಿದ ಅವರು, ಮೈಸೂರು ಹಾಲಿ ಸಂಸದ ಪ್ರತಾಪ ಸಿಂಹ, ದಕ್ಷಿಣ ಕನ್ನಡದ ಹಾಲಿ ಸಂಸದ ನಳೀನ್ ಕುಮಾರ್ ಕಟೀಲ್ ಅವರಿಗೆ ಬಿಜೆಪಿ ನಾಯಕರು ಕೈಕೊಟ್ಟಿದ್ದಾರೆ ಎಂದರು.

ತಾಲ್ಲೂಕಿನ ತಿಟ್ಟಮಾರನಹಳ್ಳಿ ಗ್ರಾಮದಲ್ಲಿ ಗುರುವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ದೇವೇಗೌಡರ ಕುಟುಂಬದ ವಿರುದ್ಧ ಸ್ಪರ್ಧಿಸುವುದು ನನಗೆ ಹಾಗೂ ನನ್ನ ಅಣ್ಣ ಡಿ.ಕೆ. ಶಿವಕುಮಾರ್ ಅವರಿಗೆ ಹೊಸತಲ್ಲ’ ಎಂದರು. 

‘ಜೆಡಿಎಸ್ ಮತ್ತು ಆ ಪಕ್ಷದ ನಾಯಕತ್ವದ ಬಗ್ಗೆ ಸ್ವತಃ ಎಚ್‌.ಡಿ. ದೇವೇಗೌಡ ಅವರ ಅಳಿಯ ಡಾ. ಮಂಜುನಾಥ್ ಅವರಿಗೆ ವಿಶ್ವಾಸ ಇಲ್ಲ. ಹಾಗಾಗಿಯೇ, ಅವರು ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿಯಿಂದ ಕಣಕ್ಕಿಳಿದಿದ್ದಾರೆ’ ಎಂದರು.

‘ಜೆಡಿಎಸ್‌ ಮತ್ತು ಗೌಡರ ಜನಪ್ರಿಯತೆ ಕುಸಿದಿದೆ ಎಂದು ಬಿಜೆಪಿ ಆಯ್ಕೆ ಮಾಡಿಕೊಂಡ ಡಾ.ಮಂಜುನಾಥ್ ಅವರ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ’ ಎಂದು ಸುರೇಶ್ ವ್ಯಂಗ್ಯವಾಡಿದರು.

‘ಹಾಗಾಗಿ ಜೆಡಿಎಸ್ ಕಾರ್ಯಕರ್ತರು ಇನ್ನಾದರೂ ಯೋಚನೆ ಮಾಡಬೇಕು. ಕಾಂಗ್ರೆಸ್ ಪಕ್ಷಕ್ಕೆ ಬಂದರೆ ನಿಮ್ಮ ಪರವಾಗಿ ನಾನಿರುವೆ. ಎಲ್ಲರೂ ಒಟ್ಟಿಗೆ ಕೆಲಸ ಮಾಡೋಣ’ ಎಂದು ಆಹ್ವಾನ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT