ಸೋಮವಾರ, ಜೂನ್ 27, 2022
27 °C

ಸೋಂಕಿತನ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡ ಸಂಸದ ಸುರೇಶ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕನಕಪುರ: ಕೋವಿಡ್‌ ಸೋಂಕಿನಿಂದ ಮೃತಪಟ್ಟವರ ಶವ ಸಂಸ್ಕಾರದಲ್ಲಿ ಜನರು ಪಾಲ್ಗೊಂಡರೆ ಅವರಿಗೂ ಸೋಂಕು ತಗುಲುತ್ತದೆಂದು ಭಯಪಡಬೇಕಿಲ್ಲ ಎಂಬುದನ್ನು ಸಾರ್ವಜನಿಕವಾಗಿ ತಿಳಿಸಲು ಸಂಸದ ಡಿ.ಕೆ. ಸುರೇಶ್‌ ಅವರು ಸೋಂಕಿನಿಂದ ಮೃತಪಟ್ಟಿದ್ದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತನ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡಿದ್ದರು.

ತಾಲ್ಲೂಕಿನ ಉಯ್ಯಂಬಳ್ಳಿ ಹೋಬಳಿಯ ಮುಳ್ಳಹಳ್ಳಿ ಗ್ರಾಮದ ಲೋಕೇಶ್‌ (45) ಎಂಬುವರು ಸೋಂಕಿಗೆ ತುತ್ತಾಗಿ ಭಾನುವಾರ ಮೃತಪಟ್ಟಿದ್ದರು. ಅವರ ಅಂತ್ಯಸಂಸ್ಕಾರ ಮುಳ್ಳಹಳ್ಳಿಯಲ್ಲಿ ಭಾನುವಾರ ನಡೆಯಿತು. ಈ ವೇಳೆ ಸುರೇಶ್‌ ಅವರು ಮೃತರ ಕುಟುಂಬಕ್ಕೆ ಸಾಂತ್ವನ ಹೇಳುವುದರ ಜತೆಗೆ ಅಂತ್ಯಸಂಸ್ಕಾರ ಮುಗಿಯುವವರೆಗೂ ಅಲ್ಲಿಯೇ ಇದ್ದು ಎಲ್ಲರಿಗೂ ಧೈರ್ಯ ತುಂಬಿದರು.

ಕೋವಿಡ್‌ 2ನೇ ಅಲೆಗೆ ಹೆದರಿರುವ ರಾಜಕೀಯ ಮುಖಂಡರು, ಜನಪ್ರತಿನಿಧಿಗಳು ಹೊರಬಾರದೆ ಮನೆ ಸೇರಿದ್ದಾರೆ. ಕೆಲವರು ದೂರವಾಣಿ ಕರೆ ಸ್ವೀಕರಿಸದೆ ಜನರಿಂದ ಅಂತರ‍ ಕಾಯ್ದುಕೊಂಡಿದ್ದಾರೆ.

ಸಂಸದ ಸುರೇಶ್‌ ಅವರು ತಮ್ಮ ಕ್ಷೇತ್ರದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಭೇಟಿ ನೀಡಿ ಸಾಂತ್ವನ ಹೇಳುವುದರ ಜತೆಗೆ ಕೋವಿಡ್‌ನಿಂದ ಸತ್ತವರ ಸಂಸ್ಕಾರದಲ್ಲಿ ಪಾಲ್ಗೊಳ್ಳುತ್ತಿರುವುದು ಮೆಚ್ಚುಗೆಗೆ ಪಾತ್ರವಾಗಿದೆ. 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು