ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಅಪಘಾತದಲ್ಲಿ ಗಾಯಗೊಂಡಿದ್ದ ದಂಪತಿಯನ್ನು ಉಪಚರಿಸಿದ ಸಂಸದ ಮಂಜುನಾಥ್‌

Published 17 ಜೂನ್ 2024, 5:55 IST
Last Updated 17 ಜೂನ್ 2024, 5:55 IST
ಅಕ್ಷರ ಗಾತ್ರ

ಕನಕಪುರ: ಮೈಸೂರು ರಸ್ತೆಯ ಬೆಟ್ಟಲಗುಂಡಪ್ಪ ದೇವಸ್ಥಾನದ ಮುಂಭಾಗ ಭಾನುವಾರ ಮಧ್ಯಾಹ್ನ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಆನೇಕಲ್‌ ದಂಪತಿಯನ್ನು ಸಂಸದ ಡಾ.ಸಿ.ಎನ್‌.ಮಂಜುನಾಥ್‌ ಉಪಚರಿಸಿ ಆಸ್ಪತ್ರೆಗೆ ಕಳುಹಿಸಿದರು.

ಅಪಘಾತದಲ್ಲಿ ಗಾಯಗೊಂಡಿದ್ದ ದಂಪತಿ ರಸ್ತೆಯಲ್ಲಿ ಬಿದ್ದಿದ್ದರು. ಕಬ್ಬಾಳು ದೇವಸ್ಥಾನದ ಬಳಿಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ಮಂಜುನಾಥ್‌ ಅವರು ರಸ್ತೆಯಲ್ಲಿ ಬಿದ್ದಿದ್ದ ದಂಪತಿಯನ್ನು ಆರೈಕೆ ಮಾಡಿ ಆಟೊದಲ್ಲಿ ಆಸ್ಪತ್ರೆಗೆ ಕಳಿಸಿಕೊಟ್ಟರು.

ಆನೇಕಲ್‌ನ ದಂಪತಿ ಮುತ್ತತ್ತಿ ದೇವಸ್ಥಾನದಲ್ಲಿ ಪೂಜೆ ಮುಗಿಸಿಕೊಂಡು ಬೈಕ್‌ನಲ್ಲಿ ತಮ್ಮ ಊರಿಗೆ ಮರಳುತ್ತಿದ್ದಾಗ ಹಿಂಬದಿಯಿಂದ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆ. ದಂಪತಿಯನ್ನು ಚಿಕಿತ್ಸೆಗಾಗಿ ಬೆಂಗಳೂರು ಆಸ್ಪತ್ರೆಗೆ ಕಳಿಸಲಾಗಿದೆ. ಸಾತನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT