ರಾಮನಗರ: ‘ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ಅವರು ನಿಜವಾಗಿಯೂ ಸಮುದಾಯಗಳ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿ, ಜಾತಿನಿಂದನೆ ಮಾಡಿದ್ದರೆ ಕಾನೂನು ಕ್ರಮ ಎದುರಿಸಬೇಕು’ ಎಂದು ಸಂಸದ ಡಾ. ಸಿ.ಎನ್. ಮಂಜುನಾಥ್ ಮತ್ತು ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಹೇಳಿದ್ದಾರೆ.
ನಗರದಲ್ಲಿ ಭಾನುವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಇಬ್ಬರೂ, ‘ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಆಡಿಯೊ ತುಣುಕು ಅವರದ್ದೇನಾ ಎಂಬುದು ತನಿಖೆಯಲ್ಲಿ ಗೊತ್ತಾಗಬೇಕಿದೆ. ಅವರದ್ದೇ ಆಗಿದ್ದರೆ ಈ ನೆಲದ ಕಾನೂನು ಪ್ರಕಾರ ಕ್ರಮವಾಗಲಿದೆ’ ಎಂದರು.