ಭಾನುವಾರ, ಮಾರ್ಚ್ 26, 2023
24 °C
ಕಾಂಗ್ರೆಸ್‌ಗೆ ಅಧಿಕಾರ ನಿಶ್ಚಿತ: ಇಬ್ಬರ ನಡುವೆ ತೀವ್ರ ಪೈಪೋಟಿ

ರಾಮನಗರ ನಗರಸಭೆ: ಯಾರಿಗೆ ಅಧ್ಯಕ್ಷ ಗಾದಿ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಮನಗರ: ಇಲ್ಲಿನ ನಗರಸಭೆಯ ನೂತನ ಸಾರಥಿಗಳ ಆಯ್ಕೆ ಪ್ರಕ್ರಿಯೆ ಮಂಗಳವಾರ ನಡೆಯಲಿದ್ದು, ಎಂಟು ಮಹಿಳೆಯರ ಪೈಕಿ ಯಾರಿಗೆ ಅಧ್ಯಕ್ಷ ಗಾದಿ ಒಲಿಯಲಿದೆ ಎಂಬುದರ ಕುರಿತು ಕುತೂಹಲ ಮನೆ ಮಾಡಿದೆ.

ನಗರಸಭೆ ಅಧ್ಯಕ್ಷ ಸ್ಥಾನ ಸಾಮಾನ್ಯ(ಮಹಿಳಾ) ವರ್ಗಕ್ಕೆ ಮೀಸಲಾಗಿದೆ. ಒಟ್ಟು 31 ವಾರ್ಡ್‌ಗಳ ಪೈಕಿ 20 ಸದಸ್ಯ ಬಲ ಹೊಂದಿರುವ ಕಾಂಗ್ರೆಸ್‌ ಅಧಿಕಾರ ಹಿಡಿಯುವುದು ನಿಶ್ಚಿತವಾಗಿದೆ. ಈ ಪಕ್ಷದಿಂದ ಎಂಟು ಮಹಿಳೆಯರು ಆಯ್ಕೆಯಾಗಿದ್ದು, ಯಾರಿಗೆ ಅವಕಾಶ ಸಿಗಲಿದೆ ಎಂಬುದು ಸದ್ಯದ ಕುತೂಹಲವಾಗಿದೆ.

ಸೋಮವಾರ ಸಂಜೆ ಸಂಸದ ಡಿ.ಕೆ. ಸುರೇಶ್‌ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರ ಸಭೆ ನಡೆದಿದ್ದು, ಅಲ್ಲಿ ಈ ಕುರಿತು ಚರ್ಚೆ ನಡೆಯಿತು. ಅಂತಿಮವಾಗಿ 30ನೇ ವಾರ್ಡಿನ ಸದಸ್ಯೆ ಪಾರ್ವತಮ್ಮ ಹಾಗೂ 31ನೇ ವಾರ್ಡಿನ ಸದಸ್ಯೆ ವಿಜಯಕುಮಾರಿ ಹೆಸರು ಹೆಚ್ಚು ಚರ್ಚೆಗೆ ಬಂದವು. ಆದರೆ, ಯಾರ ಹೆಸರು ಅಂತಿಮಗೊಂಡಿದೆ ಎಂಬ ಗುಟ್ಟನ್ನು ಪಕ್ಷದ ಮುಖಂಡರು ಬಿಟ್ಟುಕೊಟ್ಟಿಲ್ಲ. ಮಂಗಳವಾರ ಬೆಳಿಗ್ಗೆ ಅಭ್ಯರ್ಥಿ ಹೆಸರು ಪ್ರಕಟಿಸುವುದಾಗಿ ಹೇಳಿ ಸಂಸದ ಸುರೇಶ್‌ ಅಲ್ಲಿಂದ
ನಿರ್ಗಮಿಸಿದರು.

ಕಾಂಗ್ರೆಸ್‌ನಲ್ಲಿ ಎರಡು ಗುಂಪುಗಳು ತಮ್ಮ ಬೆಂಬಲಿಗರ ಪರವಾಗಿ ಲಾಬಿ ಮಾಡುತ್ತಿವೆ ಎನ್ನಲಾಗಿದ್ದು, ಅಂತಿಮವಾಗಿ ಡಿ.ಕೆ. ಸಹೋದರರು ಯಾರಿಗೆ ಮಣೆ ಹಾಕಲಿದ್ದಾರೆ ಎಂಬುದು ಕಾದು ನೋಡಬೇಕಿದೆ.

ಇದೇ ವೇಳೆ ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ಪ್ರಕ್ರಿಯೆ ಸಹ ನಡೆಯಲಿದೆ. ಈ ಸ್ಥಾನವು ಪರಿಶಿಷ್ಟ ಜಾತಿಗೆ ಮೀಸಲಿದ್ದು, ಈ ವರ್ಗದ ಅಡಿ ಇಬ್ಬರು ಮಾತ್ರ ಆಯ್ಕೆಯಾಗಿದ್ದಾರೆ. ಹೀಗಾಗಿ ಇಲ್ಲಿ ಹೆಚ್ಚಿನ ಸ್ಪರ್ಧೆ ಇಲ್ಲ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.