ಹತ್ಯೆ ಆರೋಪಿಗೆ ಜೀವಾವಧಿ ಶಿಕ್ಷೆ

ಬುಧವಾರ, ಮೇ 22, 2019
32 °C

ಹತ್ಯೆ ಆರೋಪಿಗೆ ಜೀವಾವಧಿ ಶಿಕ್ಷೆ

Published:
Updated:

ರಾಮನಗರ: ವ್ಯಕ್ತಿಯೊಬ್ಬರನ್ನು ಹತ್ಯೆ ಮಾಡಿದ ಆರೋಪಿಗೆ 14 ವರ್ಷ ಜೀವಾವಧಿ ಶಿಕ್ಷೆ ಹಾಗೂ ₹1 ಲಕ್ಷ ದಂಡ ವಿಧಿಸಿ ಇಲ್ಲಿನ ಮೂರನೇ ಹೆಚ್ಚುವರಿ ಮತ್ತು ಸೆಷನ್ಸ್‌ ನ್ಯಾಯಾಲಯವು ಬುಧವಾರ ಆದೇಶ ನೀಡಿತು.

ಚನ್ನಪಟ್ಟಣ ನಿವಾಸಿ ನದ್ದು ಅಲಿಯಾಸ್ ನದೀಮ್‌ ಶಿಕ್ಷೆಗೆ ಗುರಿಯಾದವರು. ಪ್ರಕರಣದ ಎರಡನೇ ಆರೋಪಿಯಾಗಿದ್ದ ಮುಜಾಮಿಲ್‌ ಗೆ 1 ವರ್ಷ ಜೈಲು ವಾಸ ಹಾಗೂ ₹500 ದಂಡ ವಿಧಿಸಲಾಗಿದ್ದು, ಮೂರನೇ ಆರೋಪಿ ಸದ್ದಾಂರನ್ನು ನ್ಯಾಯಾಲಯವು ಖುಲಾಸೆ ಮಾಡಿತು.

ಹಿನ್ನೆಲೆ: ಚನ್ನಪಟ್ಟಣದ ಡೈರಾ ಶಾಲೆಯ ಬಳಿ 2017ರ ಸೆಪ್ಟೆಂಬರ್‌ 21ರಂದು ಕಲಾ ನಗರ ನಿವಾಸಿ ಫೈಜಲ್‌ ಎಂಬುವರನ್ನು ಕ್ಷುಲಕ ಕಾರಣಕ್ಕೆ ಹತ್ಯೆ ಮಾಡಲಾಗಿತ್ತು. ಈ ಸಂಬಂಧ ಚನ್ನಪಟ್ಟಣ ಪೂರ್ವ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶ ಗೋಪಾಲಕೃಷ್ಣ ರೈ ಅವರು ಬುಧವಾರ ಶಿಕ್ಷೆಯ ಪ್ರಮಾಣ ಪ್ರಕಟಿಸಿದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !