ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ಯಾನ್ಸರ್ ಪೀಡಿತನಾಗಿ ಇನ್ನೆಷ್ಟು ದಿನ ಬದುಕುವೆನೊ ಗೊತ್ತಿಲ್ಲ: ಮುತ್ತಪ್ಪ ರೈ

Last Updated 20 ಜನವರಿ 2020, 13:07 IST
ಅಕ್ಷರ ಗಾತ್ರ

ರಾಮನಗರ: ಕ್ಯಾನ್ಸರ್ ನನ್ನನ್ನು ಸಾವಿನ ದವಡೆಗೆ ನೂಕಿರುವುದು‌‌ ನಿಜ. ಪವಾಡ ಸದೃಶ ರೀತಿಯಲ್ಲಿ ಬದುಕುತ್ತಿದ್ದೇನೆ ಎಂದು ಜಯ‌ ಕರ್ನಾಟಕ ಸಂಘಟನೆ ಸಂಸ್ಥಾಪಕ ಮುತ್ತಪ್ಪ ರೈ ಹೇಳಿದರು.

‘ವರ್ಷದ ಹಿಂದೆ ಕುಕ್ಕೆಗೆ ಹೋಗುವ ಸಂದರ್ಭದಲ್ಲಿ ಬೆನ್ನು ನೋವು‌ ಕಾಣಿಸಿಕೊಂಡಿತು. ನಂತರದಲ್ಲಿ ಪರೀಕ್ಷೆ ಮಾಡಲಾಗಿ ಲಿವರ್ ಕ್ಯಾನ್ಸರ್ ಇರುವುದು ಪತ್ತೆಯಾಯಿತು. ನಂತರ ದೆಹಲಿಯ ಮ್ಯಾಕ್ಸ್, ಚೆನ್ಮೈನ ಅಪೋಲೊ , ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದೆ’ ಎಂದು ಕಾನ್ಸರ್‌ ಕುರಿತುಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

‘ಶೇ 90ರಷ್ಟು ಗುಣ ಆಗಿರುವುದಾಗಿ ವೈದ್ಯರು ಹೇಳಿದರು. ಆದರೆ ನಂತರದಲ್ಲಿ ಮಿದುಳಿಗೆ‌ ಕ್ಯಾನ್ಸರ್‌ ತಗುಲಿತ್ತು. ಕೆಲವು ತಿಂಗಳಷ್ಟೇ ಬದುಕುವುದಾಗಿ ವೈದ್ಯರು ಹೇಳಿದರು. ಹೀಗಾಗಿ ಬಿಡದಿಗೆ ವಾಪಸ್ ಆಗಿದ್ದೇನೆ. ನನಗೀಗ 68 ವರ್ಷ. ಐದು ಗುಂಡು ಬಿದ್ದರೂ‌ ಬದುಕಿದವನು. ಸಾವಿಗೆ ಹೆದರುವುದಿಲ್ಲ. ವಿಲ್ ಪವರ್‌ನಿಂದ ಬದುಕುತ್ತಿದ್ದೇನೆ. ಸಮಾಜ ಸೇವೆ ಮುಂದುವರಿಸುತ್ತೇನೆ’ಎಂದು ತಿಳಿಸಿದರು.

‘ವರ್ಷಕ್ಕೆ 25-30 ಕೋಟಿ ತೆರಿಗೆ ಕಟ್ಟುತ್ತಿದ್ದೇನೆ. ಆಸ್ತಿ ಕುರಿತು ಈಗಾಗಲೇ ವಿಲ್ ಮಾಡಿಸಿದ್ದು, ಮಕ್ಕಳಿಗೂ ತಿಳಿಸಿದ್ದೇನೆ. ಕಳೆದ 15-20 ವರ್ಷದಿಂದ ನನ್ನ ಜೊತೆಗಿರುವವರಿಗೆ ಒಂದೊಂದು ನಿವೇಶನ ಕೊಡುವಂತೆ ತಿಳಿಸಿದ್ದೇನೆ. ಕರ್ನಾಟಕ ಅಥ್ಲೆಟಿಕ್ಸ್ ಸಂಸ್ಥೆ ಅಧ್ಯಕ್ಷ‌ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಜಯ ಕರ್ನಾಟಕ ಸಂಘಟನೆಯ ಅಧ್ಯಕ್ಷ ಸ್ಥಾನಕ್ಕೆ ಹೊಸಬರನ್ನು ನೇಮಿಸಿದ್ದೇನೆ’ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT