ಕನಕಪುರ: ರಾಮನಗರದಲ್ಲಿ ನಡೆದ ಬೆಂಗಳೂರು ದಕ್ಷಿಣ ಜಿಲ್ಲಾ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದ 100 ಮೀಟರ್ ಓಟದ ಸ್ಪರ್ಧೆಯಲ್ಲಿ ಅಚ್ಚಲು ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ನಾಗರಾಜು.ಎಸ್ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಎಸ್.ನಾಗರಾಜ್ ಅವರು ಕನಕಪುರ ತಾಲ್ಲೂಕಿನಲ್ಲಿ ನಡೆದ ತಾಲ್ಲೂಕು ಪಟ್ಟದ ಕ್ರೀಡಾಕೂಟದಲ್ಲಿ ಸ್ಪರ್ಧೆ ಮಾಡಿದ್ದು ಅದರಲ್ಲಿ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದರು.

ರಾಮನಗರದಲ್ಲಿ ಬುಧವಾರ ನಡೆದ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಕನಕಪುರ ತಾಲ್ಲೂಕನ್ನು ಪ್ರತಿನಿಧಿಸಿ ಅಲ್ಲಿಯು ಗೆದ್ದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ನಾಗರಾಜು ಉತ್ತಮ ಕ್ರೀಡಾ ಶಿಕ್ಷಕರಾಗಿದ್ದು ಇವರ ತರಬೇತಿಯಲ್ಲಿ ಅಚ್ಚಲು ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮತ್ತು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿ ಗೆಲವು ಸಾಧಿಸಿ ಚಿನ್ನದ ಪದಕವನ್ನು ಪಡೆದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.