ಮಂಜುನಾಥ ಸ್ವಾಮಿ ನರೇಗಾ ಯೋಜನಾ ನಿರ್ದೇಶಕ ಜಿಲ್ಲಾ ಪಂಚಾಯಿತಿ ರಾಮನಗರ
ಪ್ರತಿ ವರ್ಷದಂತೆ ಈ ವರ್ಷವೂ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯ ನರೇಗಾದಡಿ ಕೌಶಲ ರಹಿತ ಕೂಲಿ ಕೆಲಸ ಮಾಡುವ ಕೂಲಿಕಾರರ ದಿನಗೂಲಿಯನ್ನು ಹೆಚ್ಚಳ ಮಾಡಿದೆ. ಇದರಿಂದಾಗಿ ಕೂಲಿಕಾರರಿಗೆ ಹೆಚ್ಚಿನ ಅನುಕೂಲವಾಗಲಿದೆ
– ಅನ್ಮೋಲ್ ಜೈನ್, ಸಿಇಒ ಜಿಲ್ಲಾ ಪಂಚಾಯಿತಿ ರಾಮನಗರ
ಕನಕಪುರದಲ್ಲಿ ಹೆಚ್ಚು ಕೂಲಿಕಾರರು
‘ಜಿಲ್ಲೆಯ ಕನಕಪುರ ತಾಲ್ಲೂಕಿನಲ್ಲಿ ನರೇಗಾದಡಿ ನೋಂದಣಿಯಾಗಿರುವ ಅತಿ ಹೆಚ್ಚು 159824 ಕೂಲಿ ಕಾರ್ಮಿಕರಿದ್ದಾರೆ. ನಂತರದ ಸ್ಥಾನದಲ್ಲಿರುವ ಚನ್ನಪಟ್ಟಣ ತಾಲ್ಲೂಕಿನಲ್ಲಿ 96618 ಮಂದಿ ಮಾಗಡಿ ತಾಲ್ಲೂಕಿನಲ್ಲಿ 88265 ಹಾಗೂ ರಾಮನಗರ ತಾಲ್ಲೂಕಿನಲ್ಲಿ ಅತಿ ಕಡಿಮೆ 76732 ನರೇಗಾ ಕೂಲಿ ಕಾರ್ಮಿಕರಿದ್ದಾರೆ ಎಂದು ಜಿಲ್ಲಾ ಪಂಚಾಯಿತಿಯ ನರೇಗಾ ಯೋಜನಾ ನಿರ್ದೇಶಕ ಮಂಜುನಾಥ ಸ್ವಾಮಿ ‘ಪ್ರಜಾವಾಣಿ’ಗೆ ತಿಳಿಸಿದರು.