ರಾಮನಗರ: ಜಿಲ್ಲೆಯ ನ್ಯಾಯಾಲಯದಲ್ಲಿ ಬಾಕಿ ಇರುವ ಹಾಗೂ ರಾಜಿ ಆಗಬಹುದಾದ ಪ್ರಕರಣಗಳನ್ನು ಶನಿವಾರ ನಡೆಯಲಿರುವ ರಾಷ್ಟ್ರೀಯ ಲೋಕ ಅದಾಲತ್ನಲ್ಲಿ ಇತ್ಯರ್ಥಗೊಳಿಸಿಕೊಳ್ಳಬೇಕು ಎಂದು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಅಧ್ಯಕ್ಷ ಎಂ.ಎಚ್. ಅಣ್ಣಯ್ಯನವರ ಹಾಗೂ ಸದಸ್ಯ ಕಾರ್ಯದರ್ಶಿಗಳಾದ ಸವಿತ ಪಿ.ಆರ್ ತಿಳಿಸಿದ್ದಾರೆ.

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ, ಬೆಂಗಳೂರು ದಕ್ಷಿಣ ಜಿಲ್ಲೆಯಾದ್ಯಂತ ಈ ಅದಾಲತ್ ಆಯೋಜಿಸಲಾಗಿದೆ. ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಅವಕಾಶವಿದೆ. ಸಾರ್ವಜನಿಕರು ಇದರ ಲಾಭ ಪಡೆಯಬೇಕು ಎಂದು ಹೇಳಿದ್ದಾರೆ.

ಅದಾಲತ್ಗಾಗಿ ಮಾರ್ಚ್ 13ರವರೆಗೆ ಪ್ರಕರಣಗಳನ್ನು ನೋಂದಣಿ ಮಾಡಿಕೊಳ್ಳಲಾಗಿದೆ. ಜಿಲ್ಲೆ ಹಾಗೂ ಅಧೀನ ನ್ಯಾಯಾಲಯಗಳಲ್ಲಿ ಕಲಾಪ ನಡೆಯಲಿದೆ. ಕಲಾಪಗಳಲ್ಲಿ ವಕೀಲರು ಭಾಗವಹಿಸಬಹುದು. ಅವಶ್ಯಕತೆ ಇದ್ದಲ್ಲಿ ಕಕ್ಷಿದಾರರನ್ನು ಆನ್ಲೈನ್ ಮೂಲಕ ಸಂಪರ್ಕಿಸಲಾಗುವುದು.

ಜಿಲ್ಲೆಯಲ್ಲಿ ಒಟ್ಟು 57,682 ಪ್ರಕರಣಗಳು ಬಾಕಿ ಇವೆ. ಅವುಗಳ ಪೈಕಿ ರಾಜಿಯಾಗಬಹುದಾದ ಎಲ್ಲಾ ಪ್ರಕರಣಗಳನ್ನು ರಾಷ್ಟ್ರೀಯ ಲೋಕ ಅದಾಲತ್ನಲ್ಲಿ ರಾಜಿ ಪ್ರಕರಣಗಳನ್ನಾಗಿ ಪರಿಗಣಿಸಿ ಕೈಗೆತ್ತಿಕೊಳ್ಳಲಾಗುತ್ತದೆ. ವಕೀಲರು ಖುದ್ದಾಗಿ ಹಾಗೂ ಆನ್ಲೈನ್ ಮೂಲಕ ಭಾಗವಹಿಸಲು ಅವಕಾಶ ಮಾಡಿಕೊಡಲಾಗಿದೆ.

ಯಾವ ಪ್ರಕರಣ ಅರ್ಹ: ರಾಜಿಯಾಗಬಲ್ಲ ಕ್ರಿಮಿನಲ್ ಪ್ರಕರಣ, ನೆಗೋಷಿಯೇಬಲ್ ಇನ್ಸ್ಟ್ರುಮೆಂಟ್ ಕಾಯ್ದೆ (ಎನ್ಐ ಆಕ್ಟ್) ಪ್ರಕರಣ, ಸಾಲ ವಸೂಲಾತಿ ಪ್ರಕರಣ, ಬ್ಯಾಂಕ್ ಸಾಲ ವಸೂಲಾತಿ ಪ್ರಕರಣ, ಮೋಟಾರು ವಾಹನ ಅಪಘಾತ ಪ್ರಕರಣ, ಕಾರ್ಮಿಕ ವಿವಾದ ಪ್ರಕರಣ, ಗಣಿ ಮತ್ತು ಭೂ ವಿಜ್ಞಾನ ಪ್ರಕರಣ, ವೈವಾಹಿಕ ಪ್ರಕರಣ, ಭೂ ಸ್ವಾಧೀನ ಪ್ರಕರಣ, ಆಸ್ತಿ ವಿಭಾಗ ಪ್ರಕರಣ, ನಿರ್ದಿಷ್ಟ ಪ್ರಕರಣ, ಜಾರಿ ಪ್ರಕರಣ, ಹಕ್ಕು ಘೋಷಣೆ, ಶಾಶ್ವತ ನಿರ್ಬಂಧಕಾಜ್ಞೆ ಹಾಗೂ ಇತರೆ.

ಜನನ ಪ್ರಮಾಣಪತ್ರಕ್ಕೆ ಸಂಬಂಧಿಸಿದ ಪ್ರಕರಣ, ಲಘು ವ್ಯಾಜ್ಯ ಪ್ರಕರಣ, ಇತರೆ ಕ್ರಿಮಿನಲ್ ಪ್ರಕರಣ, ಭೂ ಸ್ವಾಧೀನ ಜಾರಿ ಪ್ರಕರಣ, ಜೀವನಾಂಶ ಪ್ರಕರಣ, ಕೌಟುಂಬಿಕ ದೌರ್ಜನ್ಯದಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆಗೆ ಸಂಬಂಧಿಸಿದ ಪ್ರಕರಣಗಳು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ರಾಷ್ಟ್ರೀಯ ಲೋಕ ಅದಾಲತ್ನಲ್ಲಿ ರಾಜಿ ಸಂಧಾದನ ಮುಲಕ ಇತ್ಯರ್ಥ ಮಾಡಿಕೊಳ್ಳಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.