ರಾಮನಗರ: ‘ಪ್ರಜಾಪ್ರಭುತ್ವ ಬಲಿಷ್ಠವಾಗಬೇಕೆಂದರೆ ಪ್ರತಿಯೊಬ್ಬ ಮತದಾರ ಚುನಾವಣೆಗಳಲ್ಲಿ ತಪ್ಪದೆ ಮತ ಚಲಾಯಿಸಬೇಕು’ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಹೇಳಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಮತದಾನದ ಮಹತ್ವ ತಿಳಿಸಲು ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಗುತ್ತದೆ. ಪ್ರತಿಯೊಬ್ಬರು ತಮ್ಮ ಮತದ ಶಕ್ತಿಯನ್ನು ಅರ್ಥ ಮಾಡಿಕೊಳ್ಳಬೇಕು. ಚುನಾವಣಾ ಆಯೋಗ ಸ್ವತಂತ್ರ ಹಾಗೂ ಸ್ವಾಯತ್ತ ಸಂಸ್ಥೆಯಾಗಿದೆ. ಚುನಾವಣೆ ಸಂದರ್ಭದಲ್ಲಿ ಆಯೋಗ ಹೊರಡಿಸುವ ಮಾರ್ಗಸೂಚಿಗಳು, ನೀತಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು’ ಎಂದರು.

‘ಚುನಾವಣೆ ಕೆಲಸಕ್ಕೆ ನಿಯೋಜಿತರಾದ ಅಧಿಕಾರಿಗಳು ಮತ್ತು ಸಿಬ್ಬಂದಿ ಮುಕ್ತ ಹಾಗೂ ಪಾರದರ್ಶಕವಾಗಿ ಚುನಾವಣಾ ಪ್ರಕ್ರಿಯೆ ನಡೆಸಿದರೆ ಚುನಾವಣೆಗಳು ಯಶಸ್ವಿಯಾಗುತ್ತವೆ. ಬಿಎಲ್ಒಗಳು ತಮ್ಮ ಕೆಲಸವನ್ನು ವೃತ್ತಿಪರತೆಯಿಂದ ಮಾಡಿದರೆ, ಜಿಲ್ಲಾ ಚುನಾವಣಾಧಿಕಾರಿಗೆ ಯಾವುದೇ ದೂರುಗಳು ಬರುವುದಿಲ್ಲ’ ಎಂದು ಹೇಳಿದರು.

ಚುನಾವಣಾ ಸೇವೆಗಳಲ್ಲಿ ಇ-ರೋಲ್ ಮ್ಯಾಪಿಂಗ್ ಹಾಗೂ ಪ್ರೋಜಿನಿ ಮ್ಯಾಪಿಂಗ್ ಕಾರ್ಯವನ್ನು ಅತ್ಯುತ್ತಮವಾಗಿ ನಿರ್ವಹಿಸಿದ ಬಿಎಲ್ಒಗಳನ್ನು ಅಭಿನಂದಿಸಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಿ ಸನ್ಮಾನಿಸಲಾಯಿತು.

ಹೊಸ ಮತದಾರರಿಗೆ ಜಿಲ್ಲಾಧಿಕಾರಿ ಅವರು ಮತದಾರರ ಗುರುತಿನ ಚೀಟಿಗಳನ್ನು ವಿತರಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಚಂದ್ರಯ್ಯ ಮತದಾರರ ಪ್ರತಿಜ್ಞಾ ವಿಧಿ ಬೋಧಿಸಿದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಅನ್ಮೋಲ್ ಜೈನ್ ವೇದಿಕೆಯಲ್ಲಿದ್ದರು.

ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿದ್ದರು. ಪಿಯು ಪ್ರಾಂಶುಪಾಲರ ಸಂಘದ ಜಿಲ್ಲಾಧ್ಯಕ್ಷ ಕೊತ್ತಿಪುರ ಜಿ. ಶಿವಣ್ಣ ನಿರೂಪಣೆ ಮಾಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮಧುಮತಿ ಪ್ರಾರ್ಥನೆ ಹಾಡಿದರು. ಇಲಾಖೆಯ ಸಹಾಯಕ ನಿರ್ದೇಶಕ ಕೆ. ಸತೀಶ್ ಇದ್ದರು. ಬ್ಯಾಡರಹಳ್ಳಿ ಶಿವಕುಮಾರ್ ಅವರ ತಂಡ ಗೀತ ಗಾಯನ ನಡೆಸಿ ಕೊಟ್ಟಿತು.

ಮಾದರಿ ಪ್ರಜಾಪ್ರಭುತ್ವ ರಾಷ್ಟ್ರ ಭಾರತ

‘ಪ್ರಪಂಚದ ಎಲ್ಲಾ ಪ್ರಜಾಪ್ರಭುತ್ವ ರಾಷ್ಟ್ರಗಳಿಗೆ ಭಾರತ ಮಾದರಿಯಾಗಿದೆ. ಅದಕ್ಕೆ ಕಾರಣ ಇಲ್ಲಿನ ಮತದಾನ ಪ್ರಕ್ರಿಯೆ. ಅದಕ್ಕೆ ನಮ್ಮ ಸಂವಿಧಾನ ರಚನಾಕಾರರೇ ಕಾರಣ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಂದು ಮತಕ್ಕೂ ಅತ್ಯಂತ ಮಹತ್ವವಿದೆ. ಇದಕ್ಕೆ ರಾಜ್ಯದಲ್ಲಿ ಜರುಗಿದ 2004ರ ವಿಧಾನಸಭಾ ಚುನಾವಣೆ ಉತ್ತಮ ಉದಾಹರಣೆ. ಅಂದು ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಎ.ಆರ್. ಕೃಷ್ಣಮೂರ್ತಿ ಹಾಗೂ ಧ್ರುವ ನಾರಾಯಣ್ ನಡುವೆ ಕೇವಲ ಒಂದೇ ಒಂದು ಮತ ನಿರ್ಣಾಯಕವಾಗಿತ್ತು. 40752 ಮತಗಳನ್ನು ಧ್ರುವನಾರಾಯಣ ಅವರು ಪಡೆದರೆ ಕೃಷ್ಣಮೂರ್ತಿ 40751 ಮತ ಪಡೆದರು. ನಾವು ಮತ ಚಲಾಯಿಸುವ ಜೊತೆಗೆ ಅಕ್ಕಪಕ್ಕದವರಿಗೆ ತಮ್ಮ ಹಕ್ಕು ಚಲಾಯಿಸುವಂತೆ ಜಾಗೃತಿ ಮೂಡಿಸಬೇಕು’ ಎಂದು ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಕನಕಪುರದ ಸರ್ಕಾರಿ ಪಿಯು ಕಾಲೇಜಿನ ಪ್ರಾಂಶುಪಾಲ ಡಾ. ದೊಡ್ಡಬೋರಯ್ಯ ಸಲಹೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.