ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮನಗರ | ಚುನಾವಣಾ ಕರ್ತವ್ಯ ನಿರ್ಲಕ್ಷ್ಯ: ಉಪನ್ಯಾಸಕ ಅಮಾನತು

Published 5 ಏಪ್ರಿಲ್ 2024, 5:37 IST
Last Updated 5 ಏಪ್ರಿಲ್ 2024, 5:37 IST
ಅಕ್ಷರ ಗಾತ್ರ

ರಾಮನಗರ (ಕುದೂರು): ಚುನಾವಣಾ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಮಾಗಡಿ ತಾಲ್ಲೂಕಿನ ಕುದೂರು ಜಿಪಿಯುಸಿ ಕಾಲೇಜಿನ ಉಪನ್ಯಾಸಕ ಕುಮಾರ್ ಅವರನ್ನು ಚುನಾವಣಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್ ಅವರು ಶುಕ್ರವಾರ ಅಮಾನತುಗೊಳಿಸಿದ್ದಾರೆ.

ಅಂಚೆ ಮತಪತ್ರ ಸಂಗ್ರಹಣೆ ಕರ್ತವ್ಯಕ್ಕೆ ಮೇಲ್ವಿಚಾರಣ ಸಿಬ್ಬಂದಿಯಾಗಿ ಕುಮಾರ್ ಅವರನ್ನು ನಿಯೋಜಿಸಲಾಗಿತ್ತು. ಕರ್ತವ್ಯಕ್ಕೆ ಹಾಜರಾಗದ ಅವರು, ತಾಲ್ಲೂಕು ಕಚೇರಿಯಲ್ಲಿ ನಡೆದ ಸಭೆಗೂ ಗೈರು ಹಾಜರಾಗಿದ್ದರು. ಹಾಗಾಗಿ, ಪ್ರಜಾ ಪ್ರತಿನಿಧಿ ಕಾಯ್ದೆಯಡಿ ಅವರನ್ನು ಅಮಾನತು ಮಾಡಲಾಗಿದೆ ಎಂದು ಚುನಾವಣಾಧಿಕಾರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT