ಬುಧವಾರ, ಅಕ್ಟೋಬರ್ 21, 2020
24 °C

ರಾಮನಗರ: 97 ಮಂದಿಗೆ ಸೋಂಕು: 100 ಮಂದಿ ಗುಣಮುಖ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಮನಗರ: ಜಿಲ್ಲೆಯಲ್ಲಿ ಬುಧವಾರ 97 ಮಂದಿಯಲ್ಲಿ ಕೋವಿಡ್ ಸೋಂಕು ದೃಢವಾಗಿದೆ.

ಚನ್ನಪಟ್ಟಣ 19, ಕನಕಪುರ 36, ಮಾಗಡಿ 16 ಮತ್ತು ರಾಮನಗರ 26 ಪ್ರಕರಣಗಳು ಇದರಲ್ಲಿ ಸೇರಿವೆ. ಒಟ್ಟಾರೆ ಸೋಂಕಿತರ ಸಂಖ್ಯೆ 6105ಕ್ಕೆ ಏರಿಕೆ ಆಗಿದೆ. ಈ ಪೈಕಿ ಚನ್ನಪಟ್ಟಣ 1449, ಕನಕಪುರ 1328, ಮಾಗಡಿ 963 ಮತ್ತು ರಾಮನಗರ 2365 ಸೋಂಕಿತರು ಪತ್ತೆ ಆಗಿದ್ದಾರೆ. ಚಿಕಿತ್ಸೆಗೆ ಸ್ಪಂದಿಸದೇ ರಾಮನಗರದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಒಟ್ಟಾರೆ 58 ಮಂದಿ ನಿಧನರಾಗಿದ್ದಾರೆ.

ಗುಣಮುಖ: ಚನ್ನಪಟ್ಟಣ ತಾಲ್ಲೂಕಿನಲ್ಲಿ 16, ಕನಕಪುರ ತಾಲ್ಲೂಕಿನಲ್ಲಿ 27, ಮಾಗಡಿ ತಾಲ್ಲೂಕಿನಲ್ಲಿ 19 ಹಾಗೂ ರಾಮನಗರ ತಾಲ್ಲೂಕಿನಲ್ಲಿ 38 ಜನ ಸೇರಿ ಒಟ್ಟಾರೆ 100 ಜನರು ಬುಧವಾರ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 5262 ಜನರು ಗುಣಮುಖರಾಗಿದ್ದಾರೆ. ಇನ್ನೂ 785 ಜನರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು