ಗುರುವಾರ , ಆಗಸ್ಟ್ 5, 2021
21 °C
ಎಸ್‌ಐಗೆ ಸೋಂಕು: ಕೋಡಿಹಳ್ಳಿ ಠಾಣೆ ಸೀ‌ಲ್‌ಡೌನ್‌

ರಾಮನಗರದಲ್ಲಿ ಒಂದೇ ದಿನ 29 ಪ್ರಕರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ಜಿಲ್ಲೆಯಲ್ಲಿ ಸೋಮವಾರ 29 ಮಂದಿಯಲ್ಲಿ ಕೋವಿಡ್‌ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಒಟ್ಟು ಸಂಖ್ಯೆ 262ಕ್ಕೆ ಏರಿಕೆ ಆಗಿದೆ.

ಮಾಗಡಿ ತಾಲ್ಲೂಕಿನಲ್ಲಿ 11, ರಾಮನಗರ ತಾಲ್ಲೂಕಿನಲ್ಲಿ 11, ಕನಕಪುರ ತಾಲೂಕಿನಲ್ಲಿ 4 ಹಾಗೂ ಚನ್ನಪಟ್ಟಣ ತಾಲ್ಲೂಕಿನಲ್ಲಿ 3 ಪ್ರಕರಣ ವರದಿಯಾಗಿವೆ. ಸೋಂಕಿತರನ್ನು ರಾಮನಗರದ ಕೋವಿಡ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪೊಲೀಸರಿಗೆ ಸೋಂಕು: ಕನಕಪುರ ತಾಲ್ಲೂಕಿನ ಕೋಡಿಹಳ್ಳಿ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್‌ಗೆ ಕೊರೊನಾ ಸೋಂಕು ತಗುಲಿರುವುದು ಸೋಮವಾರ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಠಾಣೆಯನ್ನು ಸದ್ಯ ಸೀಲ್‌ಡೌನ್‌ ಮಾಡಲಾಗಿದ್ದು, ಮುಂದಿನ ಕೆಲ ದಿನ ಕಾಲ ಬಂ‌ದ್‌ ಆಗಿಯೇ ಇರಲಿದೆ. ಎಸ್‌ಐ ಸಂಪರ್ಕಕ್ಕೆ ಬಂದಿರುವ ಸಿಬ್ಬಂದಿಯ ಕ್ವಾರಂಟೈನ್‌ಗೆ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿದ್ದಾರೆ.

ರಾಮನಗರದ ಪೊಲೀಸ್ ವಸತಿ ಗೃಹದಲ್ಲಿ ವಾಸವಿದ್ದ ಡಿಸಿಆರ್‌ಬಿ ಮಹಿಳಾ ಕಾನ್‌ಸ್ಟೆಬಲ್‌ ಒಬ್ಬರಿಗೂ ಕೊರೊನಾ ಸೋಂಕು ದೃಢವಾಗಿದೆ. ಈ ಹಿನ್ನೆಲೆಯಲ್ಲಿ ಆಕೆಯ ಮನೆಯವರನ್ನು ಕ್ವಾರಂಟೈನ್ ಮಾಡಲಾಗಿದೆ. ರಾಮನಗರದ ರಾಯರದೊಡ್ಡಿ, ಗೀತಾಮಂದಿರ ಬಡಾವಣೆ ಮೊದಲಾದ ಪ್ರದೇಶಗಳಲ್ಲೂ ಸೋಂಕಿತರು ಪತ್ತೆಯಾಗಿದ್ದಾರೆ. ಆದರೆ ಸದ್ಯ ಈ ಪ್ರದೇಶಗಳನ್ನು ಸೀಲ್‌ಡೌನ್‌ ಮಾಡಿಲ್ಲ. ಕೆಂಪೇಗೌಡನದೊಡ್ಡಿ ಕ್ವಾರಂಟೈನ್‌ ಕೇಂದ್ರದಲ್ಲಿ ಇದ್ದವರ ಪೈಕಿ ಒಬ್ಬರಿಗೆ ಸೋಂಕು ಖಾತ್ರಿಯಾದ ಹಿನ್ನೆಲೆಯಲ್ಲಿ ಉಳಿದವರನ್ನೂ ಮತ್ತೆ ಕ್ವಾರಂಟೈನ್‌ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ. ಕೈಲಾಂಚ ಹೋಬಳಿಯ ಚನ್ನಮಾನಹಳ್ಳಿ ಸೇರಿದಂತೆ ಹಲವು ಗ್ರಾಮಗಳು ಸೀಲ್‌ಡೌನ್‌ ಆಗಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು