ಭಾನುವಾರ, ಫೆಬ್ರವರಿ 23, 2020
19 °C

ಫೆ. 10ರಂದು ಬೆಂಗಳೂರಲ್ಲಿ ನಿಖಿಲ್ ನಿಶ್ಚಿತಾರ್ಥ, ರಾಮನಗರದಲ್ಲಿ ಮದುವೆ: ಎಚ್‌ಡಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ರಾಮನಗರ: ನಿಖಿಲ್ ನಿಶ್ಚಿತಾರ್ಥ ಫೆಬ್ರವರಿ 10ರಂದು ಬೆಂಗಳೂರಿನಲ್ಲಿ ನಡೆಯಲಿದೆ. ಮದುವೆಯನ್ನು ರಾಮನಗರ- ಚನ್ನಪಟ್ಟಣ ನಡುವೆ ಮಾಡುತ್ತೇವೆ ಎಂದು ಶಾಸಕ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಚನ್ನಪಟ್ಟಣದಲ್ಲಿ ಸೋಮವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು, 'ರಾಮನಗರ ನನಗೆ ರಾಜಕೀಯ ಪುನರ್ಜನ್ಮ ನೀಡಿದ ಕ್ಷೇತ್ರ. ಇಲ್ಲಿನ ಜನರ ಋಣ ತೀರಿಸುವ ಜವಾಬ್ದಾರಿ ನನ್ನ ಮೇಲಿದೆ. ರಾಮನಗರ, ಮಂಡ್ಯ ಜಿಲ್ಲೆಗಳ ಜನರಿಗೆ ಊಟ ಹಾಕಿಸಬೇಕು ಎಂಬ ಆಸೆ ಇತ್ತು. ಮಗನ ಮದುವೆ ಮೂಲಕ ಅದು ಈಡೇರಲಿದೆ' ಎಂದರು.

ಇದನ್ನೂ ಓದಿ: 

ಕಾಂಗ್ರೆಸ್‌ನ ಹಿರಿಯ ಶಾಸಕ ಎಂ.ಕೃಷ್ಣಪ್ಪ ಅವರ ಅಣ್ಣನ ಮೊಮ್ಮಗಳು ರೇವತಿ ಜತೆ ವಿವಾಹ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು