ಉಪ ಚುನಾವಣೆ ಫಲಿತಾಂಶವನ್ನು ಯಾರೂ ನಿರೀಕ್ಷೆ ಮಾಡಿರಲಿಲ್ಲ. ನಾವು ಸೋತಿದ್ದೇವೆಯೇ ಹೊರತು ಸತ್ತಿಲ್ಲ. ಒಗ್ಗಟ್ಟಾಗಿ ಹೋರಾಟ ಮಾಡೋಣ ಎಂದು ಜೆಡಿಎಸ್ ಮುಖಂಡ ನಿಖಿಲ್ ಕುಮಾರಸ್ವಾಮಿ ಹೇಳಿದರು. ಚನ್ನಪಟ್ಟಣದಲ್ಲಿ ಶನಿವಾರ ಮತದಾರರ ಕೃತಜ್ಞತಾ ಸಭೆಯಲ್ಲಿ ಮಾತನಾಡಿದ ಅವರು, ‘ಕ್ಷೇತ್ರದ 87 ಸಾವಿರಕ್ಕೂ ಹೆಚ್ಚು ಜನ ಮತ ನೀಡಿದ್ದಾರೆ. ಅವರ ನಂಬಿಕೆ ಉಳಿಸಿಕೊಳ್ಳಲು ಹೋರಾಡೋಣ. 15 ದಿನಗಳಲ್ಲಿ ನಾನು ಚುನಾವಣೆಗೆ ಸಿದ್ಧನಾಗಬೇಕಾಗಿತ್ತು. ಮನಸಿರದಿದ್ದರೂ ಕಾರ್ಯಕರ್ತರ ಉತ್ಸಾಹ ಕುಗ್ಗಿಸಬಾರದು ಎಂಬ ಉದ್ದೇಶದಿಂದ ಚುನಾವಣೆಗೆ ಸ್ಪರ್ಧಿಸಬೇಕಾಯಿತು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.