ಭಾನುವಾರ, 14 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸಹಕಾರ ಸಂಘದ ಅಧ್ಯಕ್ಷರ ಚುನಾವಣೆ ಮುಂದೂಡಿಕೆ: ನಿಖಿಲ್ ನೇತೃತ್ವದಲ್ಲಿ ಪ್ರತಿಭಟನೆ

Published 9 ಜುಲೈ 2024, 7:11 IST
Last Updated 9 ಜುಲೈ 2024, 7:11 IST
ಅಕ್ಷರ ಗಾತ್ರ

ರಾಮನಗರ: ತಾಲ್ಲೂಕಿನ ಹಳ್ಳಿಮಾಳ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಅಧ್ಯಕ್ಷ ಸ್ಥಾನಕ್ಕೆ ನಡೆಯಬೇಕಿದ್ದ ಚುನಾವಣೆಯನ್ನು ಚುನಾವಣಾಧಿಕಾರಿ ದಿಢೀರ್ ರದ್ದುಪಡಿಸಿರುವುದನ್ನು ಖಂಡಿಸಿ, ಜೆಡಿಎಸ್–ಬಿಜೆಪಿ ಕಾರ್ಯಕರ್ತರು ಜೆಡಿಎಸ್ ಯುವ ಘಟಕದ ರಾಜ್ಯ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಕಂದಾಯ ಭವನದ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.

ಜಿಲ್ಲೆಯ ವಿವಿಧ ಭಾಗಗಳಿಂದ ಬಂದಿದ್ದ ಎರಡೂ ಪಕ್ಷಗಳ ಕಾರ್ಯಕರ್ತರು ಸಹಕಾರ ಇಲಾಖೆ ಅಧಿಕಾರಿಗಳು, ಸ್ಥಳೀಯ ಶಾಸಕರು, ಜಿಲ್ಲಾಡಳಿತ ಹಾಗೂ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ನಿಖಿಲ್ ಕುಮಾರಸ್ವಾಮಿ ಮಾತನಾಡಿ, ಹಳ್ಳಿಮಾಳ ಸಂಘದ ಅಧ್ಯಕ್ಷ ಸ್ಥಾನದ ಚುನಾವಣೆಯನ್ನು ಎರಡು ಸಲ ಮುಂದೂಡಿರುವ ಚುನಾವಣಾಧಿಕಾರಿ ನಿಯಮಗಳನ್ನು ಗಾಳಿಗೆ ತೂರಿದ್ದಾರೆ. ಶಾಸಕರು ಹಾಗೂ ಕಾಂಗ್ರೆಸ್ ನಾಯಕರ ಕುಮ್ಮಕ್ಕು ಇದಕ್ಕೆ ಕಾರಣ. ಅಧಿಕಾರಿಗಳು ಅವರ ಆಣತಿಯಂತೆ ನಡೆದುಕೊಳ್ಳುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕೂಡಲೇ ಸಂಘಕ್ಕೆ ಚುನಾವಣೆ ನಿಗದಿಪಡಿಸಬೇಕು. ನಿಯಮಬಾಹಿರವಾಗಿ ಚುನಾವಣೆ ಮುಂದೂಡಿದ ಅಧಿಕಾರಿಯನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT