ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣೆಯಲ್ಲಿ ನನ್ನ ಸ್ಪರ್ಧೆ ಬಗ್ಗೆ ವರಿಷ್ಠರು ನಿರ್ಧರಿಸುತ್ತಾರೆ: ನಿಖಿಲ್

ರಾಜ್ಯ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ
Last Updated 6 ನವೆಂಬರ್ 2022, 5:19 IST
ಅಕ್ಷರ ಗಾತ್ರ

ಚನ್ನಪಟ್ಟಣ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವ ಅಥವಾ ಬಿಡುವ ವಿಚಾರವನ್ನು ಪಕ್ಷದ ವರಿಷ್ಠರು ತೀರ್ಮಾನಿಸುವುದಾಗಿ ರಾಜ್ಯ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ತಾಲ್ಲೂಕಿನ ಅಕ್ಕೂರು ಗ್ರಾಮದಲ್ಲಿ ಶನಿವಾರ ನಡೆದ ಪಕ್ಷದ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

‘ಸದ್ಯಕ್ಕೆ ಸ್ಪರ್ಧೆ ವಿಚಾರದ ಬಗ್ಗೆ ಯಾವುದೇ ಪ್ರಸ್ತಾಪವಿಲ್ಲ. ಸದ್ಯ ಪಕ್ಷ ಸಂಘಟನೆ ಮಾಡುವ ಜವಾಬ್ದಾರಿ ವಹಿಸಿದ್ದಾರೆ. ಅದನ್ನು ಮಾಡುತ್ತಿದ್ದೇನೆ. ರಾಜ್ಯದ ಎಲ್ಲಡೆ ಪಕ್ಷ ಸಂಘಟಿಸಲು ಪ್ರವಾಸ ಮಾಡುತ್ತೇನೆ’ ಎಂದರು.

‘ಮುಂಬರುವ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವುದಷ್ಟೆ ನಮ್ಮ ಮುಂದಿನ ಸವಾಲು. ಜೆಡಿಎಸ್ ಅತಿ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಿ ಅಧಿಕಾರಕ್ಕೆ ಬರುವುದರಲ್ಲಿ ಸಂಶಯವಿಲ್ಲ’ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಬಾಣಗಹಳ್ಳಿ, ಸೋಗಾಲ, ಹಾರೋಕೊಪ್ಪ, ಇಗ್ಗಲೂರು, ಸುಳ್ಳೇರಿ ಗ್ರಾಮಗಳಲ್ಲಿ ಅವರು ಸಭೆ ನಡೆಸಿದರು. ಎಲ್ಲ ಗ್ರಾಮಗಳಲ್ಲಿ ಅದ್ದೂರಿ ಮೆರವಣಿಗೆ ಮೂಲಕ ಸ್ವಾಗತಿಸಲಾಯಿತು.ಪಕ್ಷದ ತಾಲ್ಲೂಕು ಘಟಕದ ಅಧ್ಯಕ್ಷ ಜಯಮುತ್ತು, ನಗರಸಭೆ ಅಧ್ಯಕ್ಷ ಪ್ರಶಾಂತ್, ಪಿ.ಎಲ್.ಡಿ. ಬ್ಯಾಂಕ್ ಅಧ್ಯಕ್ಷ ಮಾಗನೂರು ಗಂಗರಾಜು, ಬಿಡಿಸಿಸಿ ಬ್ಯಾಂಕ್ ನಿರ್ದೇಶ ಕುಕ್ಕೂರುದೊಡ್ಡಿ ಜಯರಾಂ, ಹಾಪ್ ಕಾಮ್ಸ್ ದೇವರಾಜು, ವಡ್ಡರಹಳ್ಳಿ ರಾಜಣ್ಣ, ಯಾಲಕ್ಕಿಗೌಡ, ಮಲ್ಲೇಶ್, ದಾಸೇಗೌಡ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT