ನಿಮ್ಹಾನ್ಸ್ ಇಕೋ ಕಾರ್ಯಕ್ರಮಕ್ಕೆ ಚಾಲನೆ

ಶನಿವಾರ, ಮೇ 25, 2019
28 °C

ನಿಮ್ಹಾನ್ಸ್ ಇಕೋ ಕಾರ್ಯಕ್ರಮಕ್ಕೆ ಚಾಲನೆ

Published:
Updated:
Prajavani

ರಾಮನಗರ: ಜಿಲ್ಲೆಯ ಆಯ್ದ ಆರು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ 'ನಿಮ್ಹಾನ್ಸ್ ಇಕೋ' ಎಂಬ ಮಿಶ್ರಿತ ಕಾರ್ಯಕ್ರಮದ ಅನುಷ್ಠಾನ ಹಾಗೂ ಮೌಲ್ಯಮಾಪನ ಎಂಬ ಅಧ್ಯಯನವನ್ನು ಕೈಗೊಳ್ಳಲಾಗುತ್ತಿದೆ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗ, ಬೆಂಗಳೂರಿನ ನಿಮ್ಹಾನ್ಸ್, ಭಾರತೀಯ ವೈದ್ಯಕೀಯ ವಿಜ್ಞಾನಗಳ ಸಂಶೋಧನಾ ಮಂಡಳಿ, ಇಕೋ – ಯೋಜನೆ, ನ್ಯೂ ಮೆಕ್ಸಿಕೋ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಈ ಕಾರ್ಯಕ್ರಮವು ಅನುಷ್ಠಾನಗೊಳ್ಳುತ್ತಿದೆ.

ಯೋಜನೆಗೆ ಆಯ್ಕೆ ಮಾಡಲಾದ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಹಿರಿಯ ಹಾಗೂ ಕಿರಿಯ ಆರೋಗ್ಯ ಸಹಾಯಕರು ಮತ್ತು ಆಶಾ ಕಾರ್ಯಕರ್ತೆಯರಿಗೆ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಇಲ್ಲಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿತ್ತು.

ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿ ಡಾ. ಸಿ. ಮಂಜುನಾಥ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಟಿ. ಅಮರನಾಥ್, ಮನೋರೋಗ ತಜ್ಞ ಡಾ.ಎ.ಎಂ. ಆದರ್ಶ, ಡಾ. ಸಿ. ನವೀನ್ ಕುಮಾರ್, ಡಾ. ಶನಿವಾರಂ ರೆಡ್ಡಿ, ಡಾ. ಜೆ.ಆರ್. ಸೋನಾಕ್ಷಿ, ಎಸ್. ಪದ್ಮರೇಖಾ ಇದ್ದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !