ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಎಂಜಿನಿಯರಿಂಗ್‌ ಸೀಟು ತ್ಯಜಿಸಿದವರಿಗೆ ದಂಡ ಶುಲ್ಕ ರದ್ದು’

Last Updated 11 ಫೆಬ್ರುವರಿ 2022, 20:42 IST
ಅಕ್ಷರ ಗಾತ್ರ

ರಾಮನಗರ: ‘ಈಗಾಗಲೇ ಎಂಜಿನಿಯ ರಿಂಗ್ ಸೀಟು ಪಡೆದುಕೊಂಡು ಈಗ ವೈದ್ಯಕೀಯ ಕೋರ್ಸಿಗೆ ಪ್ರವೇಶ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ವಿಧಿಸುತ್ತಿದ್ದ ದಂಡ ಶುಲ್ಕವನ್ನು ರದ್ದುಪಡಿಸಲಾಗಿದೆ. ಹಾಗೆಯೇ, ಈ ವರ್ಷ ವಿದ್ಯಾರ್ಥಿಗಳಿಂದ ಸಂಗ್ರಹ ಮಾಡಿದ್ದ ಶುಲ್ಕವನ್ನೂ ಹಿಂದಿರುಗಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಸೂಚಿಸಲಾಗಿದೆ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು.

ನಗರದಲ್ಲಿ ಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಈ ವಿನಾಯಿತಿ ಈ ವರ್ಷಕ್ಕೆ ಮಾತ್ರ‌ ಅನ್ವಯಿಸುತ್ತದೆ’ ಎಂದು ಸ್ಪಷ್ಟಪಡಿಸಿದರು.

‘ಸಾಮಾನ್ಯವಾಗಿ ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಸೀಟು ಹಂಚಿಕೆ ಒಟ್ಟಿಗೆ ನಡೆಯುತ್ತಿತ್ತು. ಈ ವರ್ಷ ನೀಟ್ ಪರೀಕ್ಷಾ ವಿಚಾರ ಕೋರ್ಟ್ ಮೆಟ್ಟಿಲೇರಿದ್ದರಿಂದ ವೈದ್ಯಕೀಯ ಸೀಟು ಹಂಚಿಕೆ ಪ್ರಕ್ರಿಯೆ ವಿಳಂಬವಾಗಿದೆ. ಹೀಗಾಗಿ, ಅನಿಶ್ಚಿತ ಪರಿಸ್ಥಿತಿ ತಲೆದೋರಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT