ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೆಡಿಎಸ್ ಪಕ್ಷವನ್ನು ಯಾರಿಂದಲೂ ಮುಗಿಸಲು ಸಾಧ್ಯವಿಲ್ಲ

Published 23 ಏಪ್ರಿಲ್ 2024, 15:44 IST
Last Updated 23 ಏಪ್ರಿಲ್ 2024, 15:44 IST
ಅಕ್ಷರ ಗಾತ್ರ

ಹಾರೋಹಳ್ಳಿ: ‘ಜೆಡಿಎಸ್ ಪಕ್ಷವನ್ನು ಯಾರಿಂದಲೂ ಮುಗಿಸಲು ಸಾಧ್ಯವಿಲ್ಲ ಇದರ ಬಗ್ಗೆ ಕನಸು ಕಾಣುತ್ತಿರುವವರು ಮಾತನಾಡುತ್ತಿರುವವರು ಕೇವಲ ಹಗಲುಗನಸು ಕಾಣಬೇಕು’ ಎಂದು ಜೆಡಿಎಸ್ ವರಿಷ್ಠ ದೇವೇಗೌಡ ಹೇಳಿದರು.

ಹಾರೋಹಳ್ಳಿ ತಾಲ್ಲೂಕಿನ ಮರಳವಾಡಿ ಮತ್ತು ಹಾರೋಹಳ್ಳಿ ಪಟ್ಟಣದಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್ ಪರ ಮಂಗಳವಾರ ಮತಯಾಚನೆ ನಡೆಸಿ ಮಾತನಾಡಿದ ಅವರು,  ‘ಜೆಡಿಎಸ್ ಪಕ್ಷವನ್ನು ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ. ಬಿಜೆಪಿ– ಜೆಡಿಎಸ್ ಪಕ್ಷಗಳು ಸೇರಿ ಕಾಂಗ್ರೆಸ್ ಪಕ್ಷವನ್ನು ನಿರ್ನಾಮ ಮಾಡಲಿದೆ’ ಎಂದು ಹೇಳಿದರು.

‘ಕಾಂಗ್ರೆಸ್‌ನವರಿಗೆ ನಾಚಿಕೆಯಾಗಬೇಕು ಡಾ. ಸಿ.ಎನ್. ಮಂಜುನಾಥ್ ಎನ್ನುವ ಹೆಸರಿರುವ ಮೂವರು ಅಭ್ಯರ್ಥಿಗಳನ್ನು ಕಣಕ್ಕೆ ನಿಲ್ಲಿಸಿದ್ದಕ್ಕೆ. ಇದು ಅವರ ಬುದ್ಧಿವಂತಿಕೆ. ನೇರವಾಗಿ ಎದುರಾಳಿಗಳ ಜೊತೆ ಸೆಣಸಾಡದೆ ಈ ರೀತಿಯಾಗಿ ಮಾಡಿರುವುದು ಅವರು ಸೋಲುವ ಭಯದಿಂದಲೇ’ ಎಂದು ಕಿಡಿಕಾರಿದರು.

‘ದೇಶ ರಕ್ಷಣೆಗಾಗಿ ಎಲ್ಲ 28 ಸೀಟುಗಳನ್ನು ನಾವು ಗೆಲ್ಲಬೇಕಾಗಿದೆ ಅದಕ್ಕಾಗಿ ನೀವು ಬಿಜೆಪಿ ಅಭ್ಯರ್ಥಿಗಳಿಗೆ ಮತ ಹಾಕಬೇಕು. ಮೋದಿ ಆಡಳಿತದಲ್ಲಿ ದೇಶವು ಅಭಿವೃದ್ಧಿಯಲ್ಲಿ ಐದನೇ ಸ್ಥಾನದಲ್ಲಿದ್ದು ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಜಿಡಿಪಿ ಪಾತಾಳಕ್ಕೆ ಇಳಿದಿತ್ತು. ಆಗ ಬಂದ ಪ್ರಧಾನಿಯವರು ದೇಶವನ್ನು ಉನ್ನತ ಮಟ್ಟದಲ್ಲಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಕರೆದುಕೊಂಡು ಹೋಗಿದ್ದಾರೆ’ ಎಂದು ಹೇಳಿದರು.

ಮೋದಿ ಹಾಗೂ ಅಮಿತ್ ಶಾ ಒತ್ತಾಯದ ಮೇರೆಗೆ ಡಾ. ಸಿ.ಎನ್ ಮಂಜುನಾಥ್ ನಿಲ್ಲಿಸಿದ್ದು ಅವರನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್. ಮಂಜುನಾಥ್ ಮಾತನಾಡಿ, ಟೀಕೆಗಳು ಸಾಯುತ್ತವೆ ನಾವು ಮಾಡುವ ಕೆಲಸಗಳು ಶಾಶ್ವತವಾಗಿ ಉಳಿಯುತ್ತವೆ. ನಾನು ಯಾರ ಬಗ್ಗೆಯೂ ಟೀಕೆ ಮಾಡುವುದಕ್ಕೆ ಹೋಗೋದಿಲ್ಲ ನಾನು ಮಾಡಿರುವ ಸೇವೆಗೆ ಸ್ವಯಂ ಪ್ರೇರಿತವಾಗಿ ಜನರು ಬರುತ್ತಿದ್ದು ನಿಮ್ಮ ಸೇವೆಗೆ ನಾನು ಸದಾ ಚಿರಋಣಿಯಾಗಿರುತ್ತೇನೆ ಎಂದು ಹೇಳಿದರು.

ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮಾತನಾಡಿ ಮಂಜುನಾಥ್ ಅವರು ಜಯದೇವ ಆಸ್ಪತ್ರೆಯಲ್ಲಿ ಸಲ್ಲಿಸಿರುವ ಸೇವೆ ದೇಶದ ಮೂಲೆ ಮೂಲೆಗೂ ತಲುಪಿದ್ದು ಮತದಾರರು ಅವರ ಸೇವೆ ಗುರುತಿಸಿ ಹೆಚ್ಚಿನ ಅಂತರದಲ್ಲಿ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಮಾಜಿ ಶಾಸಕ ಎ. ಮಂಜುನಾಥ್, ಕೆಆರ್‌ಎಡಿಎಲ್ ಮಾಜಿ ಅಧ್ಯಕ್ಷ ಎಂ. ರುದ್ರೇಶ್, ರೇಷ್ಮೆ ನಿಗಮದ ಮಾಜಿ ಅಧ್ಯಕ್ಷ ಗೌತಮ್ ಗೌಡ, ಮುಖಂಡರಾದ ಕೆ.ಎನ್. ರಾಮು, ಮುರುಳಿಧರ್, ನಾಗರಾಜು, ಮಹದೇವಯ್ಯ, ತಮ್ಮಯಣ್ಣ, ಅಂಗರಹಳ್ಳಿ ರಮೇಶ್, ಕುಮಾರ್, ಗುರುಪ್ರಸಾದ್, ಶೇಷಾದ್ರಿ ರಾಮು ಸೇರಿದಂತೆ ಇತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT