ಗಾಂಧೀಜಿ ಪ್ರಚುರಪಡಿಸಿದ ಜನಪರ ಕಾರ್ಯಕ್ರಮಗಳಾದ ಅಸ್ಪೃಶ್ಯತೆ ನಿವಾರಣೆ, ಅಹಿಂಸೆ, ಮಹಿಳಾ ಸಬಲೀಕರಣ, ಗ್ರಾಮೀಣ ನೈರ್ಮಲ್ಯ, ಮದ್ಯಪಾನ ವಿರೋಧಿ ನೀತಿ, ಖಾದಿ ಮತ್ತು ಸ್ವದೇಶಿವಸ್ತು ಬಳಕೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉದ್ದಾರ ಕಾರ್ಯಗಳಲ್ಲಿ ಸ್ವಯಂ ಪ್ರೇರಣೆಯಿಂದ ತೊಡಗಿರುವ ವ್ಯಕ್ತಿಗಳು ಅಥವಾ ಸಂಸ್ಥೆಗಳು ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು. ಸಂಘ ಸಂಸ್ಥೆಗಳು ಅಥವಾ ವ್ಯಕ್ತಿಗಳು ಸಹ ನಾಮನಿರ್ದೇಶನ ಮಾಡಬಹುದಾಗಿದೆ.