ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮನಗರ | ಮಲೇರಿಯಾ ತಡೆಗೆ ಸೂಚನೆ

ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಮುಂಜಾಗ್ರತೆಗೆ ಅಗತ್ಯ
Last Updated 15 ಮೇ 2022, 4:46 IST
ಅಕ್ಷರ ಗಾತ್ರ

ರಾಮನಗರ: ವಿಶ್ವ ಮಲೇರಿಯಾ ದಿನಾಚರಣೆ ಅಂಗವಾಗಿ ಮಲೇರಿಯಾ ರೋಗದ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಕಾರ್ಯವನ್ನು ಆರೋಗ್ಯ ಇಲಾಖೆ ಮಾಡುತ್ತಿದೆ ಎಂದು ರಾಮನಗರ ನಗರಸಭೆ ಅಧ್ಯಕ್ಷೆ ಬಿ.ಸಿ. ಪಾರ್ವತಮ್ಮ ತಿಳಿಸಿದರು.

ಜಿಲ್ಲಾಡಳಿತ, ಆರೋಗ್ಯ ಇಲಾಖೆ ಹಾಗೂ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಕಚೇರಿಯಿಂದ ಶನಿವಾರ ಆಯೋಜಿಸಿದ್ದ ವಿಶ್ವ ಮಲೇರಿಯಾ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

ಸಾಂಕ್ರಾಮಿಕ ರೋಗವಾಗಿರುವ ಮಲೇರಿಯಾ ಅನಾಫಿಲಿಸ್ ಸೊಳ್ಳೆಯಿಂದ ಹರಡುತ್ತದೆ. ನಮ್ಮ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಈ ರೋಗದ ನಿಯಂತ್ರಣ ಸಾಧ್ಯ ಎಂದರು.

ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಪ್ರಸನ್ನಕುಮಾರ್ ಮಾತನಾಡಿ, ‘ಮಲೇರಿಯಾದಂತಹ ಸಾಂಕ್ರಾಮಿಕ ರೋಗವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ಹಂತಕ್ಕೆ ತರುವಲ್ಲಿ ಸಾರ್ವಜನಿಕರ ಮತ್ತು ಆರೋಗ್ಯ ಸಿಬ್ಬಂದಿ ಶ್ರಮ ಪ್ರಮುಖವಾಗಿದೆ’ ಎಂದರು.

ಮನೆಯ ಸುತ್ತಮುತ್ತ ಬಿಸಾಡಿದ ವಸ್ತುಗಳಲ್ಲಿ ನೀರು ಸಂಗ್ರಹವಾಗದಂತೆ ನೋಡಿಕೊಳ್ಳಬೇಕು. ನೀರು ನಿಂತಿರುವುದು ಕಂಡುಬಂದರೆ ಅದನ್ನು ವಿಲೇವಾರಿ ಮಾಡಬೇಕು. ಸ್ವಯಂ ರಕ್ಷಣಾ ವಿಧಾನ ಅಳವಡಿಸಿಕೊಂಡಾಗ ಸೊಳ್ಳೆಗಳ ಉತ್ಪತ್ತಿಯಾಗುವುದು ಕಡಿಮೆಯಾಗುತ್ತದೆ. ಅಲ್ಲದೆ, ಸೊಳ್ಳೆ ಕಡಿತದಿಂದ ಹಾಗೂ ಅವುಗಳಿಂದ ಹರಡುವ ರೋಗದಿಂದ ಮುಕ್ತರಾಗಬಹುದು ಎಂದು ಸಲಹೆ ನೀಡಿದರು.

‘ನವೀನ ವಿಧಾನಗಳನ್ನು ಬಳಸೋಣ. ಮಲೇರಿಯಾ ಕಡಿಮೆ ಮಾಡಿ ಜೀವ ಉಳಿಸೋಣ’ ಎಂಬ ಘೋಷವಾಕ್ಯವನ್ನು ಜನರು ಅಳವಡಿಸಿಕೊಂಡಾಗ ಮಲೇರಿಯಾ ಮುಕ್ತ ಭಾರತ ನಿರ್ಮಾಣ ಸಾಧ್ಯ ಎಂದು ತಿಳಿಸಿದರು.

ಮಲೇರಿಯಾ ರೋಗದ ಹಿನ್ನಲೆ ಹಾಗೂ ನಿಯಂತ್ರಣ ಕುರಿತು ಕೀಟಶಾಸ್ತ್ರಜ್ಞೆ ಎನ್. ಸೌಮ್ಯಾ ಉಪನ್ಯಾಸ ನೀಡಿದರು. ನಗರಸಭೆ ಉಪಾಧ್ಯಕ್ಷೆ ಟಿ. ಜಯಲಕ್ಷಮ್ಮ, ಡಿ.ಟಿ.ಓ ಕುಮಾರ್, ಆರೋಗ್ಯ ಮೇಲ್ವಿಚಾರಕ ಆರ್. ರೇಣುಕಯ್ಯ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಎಚ್‌.ಸಿ. ರಾಜೇಂದ್ರ, ತಾಲ್ಲೂಕು ವೈದ್ಯಾಧಿಕಾರಿಗಳು, ಆರೋಗ್ಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT