ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ಯಾನವಾಪಿ ಮಸೀದಿ ತೀರ್ಪು ಕುರಿತು ಆಕ್ಷೇಪಾರ್ಹ ಪೋಸ್ಟ್: ವಕೀಲನ ಬಂಧನ

Published 13 ಫೆಬ್ರುವರಿ 2024, 7:45 IST
Last Updated 13 ಫೆಬ್ರುವರಿ 2024, 7:45 IST
ಅಕ್ಷರ ಗಾತ್ರ

ರಾಮನಗರ: ಉತ್ತರಪ್ರದೇಶದ ಗ್ಯಾನವಾಪಿ ಮಸೀದಿಯಲ್ಲಿ ಕೋರ್ಟ್ ಪೂಜೆಗೆ ಅವಕಾಶ ಕಲ್ಪಿಸಿದ ತೀರ್ಪು ಕುರಿತು ಫೇಸ್‌ಬುಕ್‌ನಲ್ಲಿ ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದ ನಗರದ ವಕೀಲ ಹಾಗೂ ಎಸ್‌ಡಿಪಿಐ ಮುಖಂಡ ಚಾನ್‌ ಪಾಷ ಅವರನ್ನು ರಾಮನಗರ ಪುರ ಠಾಣೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಪಾಷ ಅವರ ಆಕ್ಷೇಪಾರ್ಹ ಪೋಸ್ಟ್ ಕುರಿತು ನಗರದ ಬಿಜೆಪಿ ಮುಖಂಡ ಪಿ. ಶಿವಾನಂದ ಅವರು ನೀಡಿದ್ದ ದೂರಿನ ಮೇರೆಗೆ, ಫೆ. 3ರಂದು ಪಾಷ ವಿರುದ್ಧ ಐಪಿಸಿ 504, 505(3) ಕಲಂಗಳಡಿ ಎಫ್ಐಆರ್ ದಾಖಲಾಗಿತ್ತು.

ಬೆಳಿಗ್ಗೆಯೇ ಪಾಷ ಅವರನ್ನು ಬಂಧಿಸಿದ ಪೊಲೀಸರು, ನ್ಯಾಯಾಲಯಕ್ಕೆ ಹಾಜರುಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT