ಶನಿವಾರ, ಜನವರಿ 25, 2020
29 °C
KANAKAPURA

ಡಿ.25ರಂದು ಒಕ್ಕಲಿಗರ ಸಂಘದಿಂದ ಭವನ ಉದ್ಘಾಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕನಕಪುರ: ಜಿಲ್ಲೆಯಲ್ಲಿ ಒಕ್ಕಲಿಗರ ಸಂಘಟನೆಗಳು ಪ್ರಬಲವಾಗಿದ್ದರೂ ಯಾವುದೇ ಭವನ ನಿರ್ಮಾಣವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಒಕ್ಕಲಿಗರ ಸಂಘ ರಾಮನಗರ ಘಟಕದಿಂದ ಮೂರು ಅಂತಸ್ತಿನ ಭವ್ಯಭವನ ನಿರ್ಮಾಣ ಮಾಡಿದ್ದು ಡಿ.25ರಂದು ಉದ್ಘಾಟನೆಗೊಳ್ಳಲಿದೆ ಎಂದು ತಾಲ್ಲೂಕು ಘಟಕದ ಅಧ್ಯಕ್ಷ ಹನುಮೇಲಿಂಗು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮುದಾಯದ ಬಡ ವಿದ್ಯಾರ್ಥಿಗಳಿಗೆ ಯಾವುದೇ ವಸತಿ ನಿಲಯಗಳಿಲ್ಲ. ಇದಕ್ಕಾಗಿ ರಾಮನಗರದಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ಭವನದ 2ನೇ ಅಂತಸ್ತಿನಲ್ಲಿ ಸಮುದಾಯದ 100ಮಂದಿ ಬಡ ವಿದ್ಯಾರ್ಥಿಗಳಿಗೆ ಉಚಿತ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.

ಪ್ರಧಾನ ಕಾರ್ಯದರ್ಶಿ.ಎ.ಬಿ ಚೇತನ್‌ಕುಮಾರ್‌ ಮಾತನಾಡಿ, ಭವನ ನಿರ್ಮಾಣವನ್ನು ಸಮುದಾಯದ ದಾನಿಗಳಿಂದ ಹಣ ಸಂಗ್ರಹಿಸಿ ನಿರ್ಮಾಣ ಮಾಡಲಾಗಿದೆ. ಇದರಿಂದ ಸಮುದಾಯದ ಜನರಿಗೆ ಉಪಯೋಗವಾಗಲಿದೆ ಎಂದು ತಿಳಿಸಿದರು.

ಆದಿಚುಂಚನಗಿರಿ ನಿರ್ಮಲಾನಂದನಾಥಸ್ವಾಮೀಜಿ, ವಿಶ್ವಒಕ್ಕಲಿಗರ ಮಹಾ ಸಂಸ್ಥಾನದ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ, ಸ್ಫಟಿಕಪುರಿ ಮಹಾಸಂಸ್ಥಾನ ಮಠದ ನಂಜಾವದೂತಸ್ವಾಮೀಜಿ, ಆದಿಚುಂಚನಗಿರಿ ರಾಮನಗರ ಶಾಖಾ ಮಠದ ಅನ್ನದಾನೇಶ್ವರನಾಥ ಸ್ವಾಮೀಜಿ ಭವನವನ್ನು ಡಿ.25ರ ಬೆಳಿಗ್ಗೆ 10ಕ್ಕೆ ಉದ್ಘಾಟಿಸಲಿದ್ದಾರೆ. ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಡಿಸಿಎಂ ಅಶ್ವತ್ಥ್‌ ನಾರಯಣ್‌, ಸಂಸದ ಡಿ.ಕೆ.ಸುರೇಶ್‌, ಮಾಜಿ ಸಚಿವರಾದ ಡಿ.ಕೆ.ಶಿವಕುಮಾರ್‌, ಸಿ.ಪಿ.ಯೋಗೀಶ್ವರ್‌, ಶಾಸಕರಾದ ಅನಿತಾ ಕುಮಾರಸ್ವಾಮಿ, ಸಿ.ಎಂ.ಲಿಂಗಪ್ಪ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಒಕ್ಕಲಿಗರ ಸಂಘದ ಕನಕಪುರ ಘಟಕದ ಮಾಜಿ ಅಧ್ಯಕ್ಷ ಯದುನಂದನ್‌ ಬಾಬು ಮಾತನಾಡಿ, ಬಹಳ ವರ್ಷಗಳ ಕನಸು ನನಸಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಸಮುದಾಯದ ಜನರು ಪಾಲ್ಗೊಳ್ಳಬೇಕೆಂದು ಮನವಿ ಮಾಡಿದರು.

ಪ್ರತಿಕ್ರಿಯಿಸಿ (+)