ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೀತ ಗಾಯನ ಸ್ಪರ್ಧೆ 19ರಂದು

Last Updated 17 ಫೆಬ್ರುವರಿ 2022, 4:25 IST
ಅಕ್ಷರ ಗಾತ್ರ

ರಾಮನಗರ: ಇಲ್ಲಿನ ಜಾನಪದ ಲೋಕದಲ್ಲಿ ಎಚ್.ಎನ್ ನಂಜರಾಜ ಸ್ಮರಣಾರ್ಥ ರಾಜ್ಯಮಟ್ಟದ ಗೀತ ಗಾಯನ ಸ್ಪರ್ಧೆಯು ಇದೇ 19ರಂದು ಬೆಳಿಗ್ಗೆ 10ಕ್ಕೆ ನಡೆಯಲಿದೆ.

15 ವರ್ಷದಿಂದ 35 ವರ್ಷದ ಒಳಗಿನ ಆಸಕ್ತ ಕಲಾವಿದರು ಮತ್ತು ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಬಹುದು. ಸ್ಪರ್ಧೆಯಲ್ಲಿ ವಿಜೇತರಾದವರಿಗೆ ನಗದು ಬಹುಮಾನ ನೀಡಲಾಗುವುದು. ಮಾಹಿತಿಗಾಗಿ ಜಾನಪದ ಲೋಕ ಕಚೇರಿ ಸಂಖ್ಯೆ 77956 32294, ರವಿ– 79756 61363, ಎಸ್‌. ಪ್ರದೀಪ್ - 81970 37299 ಅವರನ್ನು ಸಂಪರ್ಕಿಸಬಹುದು.

ಸಹಾಯಧನಕ್ಕೆ ಅರ್ಜಿ ಆಹ್ವಾನ

ರಾಮನಗರ: ಸಮಾಜ ಕಲ್ಯಾಣ ಇಲಾಖೆಯಿಂದ 2021-22ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ವರ್ಗದ ಉದ್ಯಮಿಗಳಿಗೆ ನೀಡುವ ಬಡ್ಡಿ ಸಹಾಯಧನ ಯೋಜನೆಯನ್ನು ಮಳಿಗೆ, ಡೀಲರ್ ಶಿಫ್, ಪ್ರಾಂಚೈಸಿ, ಹೋಟೆಲ್ ಉದ್ಯಮಕ್ಕೂ ವಿಸ್ತರಿಸಲಾಗಿದೆ.

ಈ ಯೋಜನೆಯಡಿ ಗರಿಷ್ಠ ₹1 ಕೋಟಿವರೆಗೂ ಶೆಡ್ಯೂಲ್ಡ್ ಬ್ಯಾಂಕ್‌ಗಳಿಂದ ಸಾಲ ಪಡೆಯಲು ಅವಕಾಶ ಇದೆ. ಆಸಕ್ತರು ಅರ್ಜಿಗಳನ್ನು ಸಮಾಜ ಕಲ್ಯಾಣ ಇಲಾಖೆಯ ಕಚೇರಿ ವೆಬ್‌ಸೈಟ್‌ನಲ್ಲಿ ಡೌನ್‌ಲೋಡ್ ಮಾಡಿಕೊಂಡು ಭರ್ತಿಮಾಡಿದ ಅರ್ಜಿಗಳನ್ನು ನೇರವಾಗಿ ಸಂಬಂಧಪಟ್ಟ ಬ್ಯಾಂಕುಗಳಿಗೆ ಸಲ್ಲಿಸಬಹುದು ಎಂದು ಚನ್ನಪಟ್ಟಣ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗಂಗಾ ಕಲ್ಯಾಣ ಯೋಜನೆಯಡಿ ಅರ್ಜಿ

ರಾಮನಗರ: ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ 2021-22ನೇ ಸಾಲಿನ ಗಂಗಾ ಕಲ್ಯಾಣ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಹಿಂದುಳಿದ ಪ್ರವರ್ಗ 1ರ 6(ಎ) ಯಿಂದ 6(ಎಕೆ)ವರೆಗೆ ಬರುವ ಬೆಸ್ತ, ಅಂಬಿಗ, ಅಂಬಿ, ಗಂಗಮತ, ಕಬ್ಬಲಿಗ, ಕೋಲಿ, ಮೊಗವೀರ ಮತ್ತು ಇವುಗಳ ಉಪ ಜಾತಿಗೆ ಒಳಪಡುವವರು ಅರ್ಜಿ ಸಲ್ಲಿಸಬಹುದು. ಅರ್ಜಿದಾರರು 18 ರಿಂದ 55 ವರ್ಷಗಳ ಮಿತಿಯಲ್ಲಿರಬೇಕು. ಕನಿಷ್ಠ 2 ಎಕರೆ ಹಾಗೂ ಗರಿಷ್ಠ 5 ಎಕರೆ ಜಮೀನು ಹೊಂದಿದ್ದು, ಯಾವುದೇ ಮೂಲದಿಂದ ನೀರಾವರಿ ಸೌಲಭ್ಯ ಹೊಂದಿಲ್ಲದೆ ಇರುವ ಸಣ್ಣ ಮತ್ತು ಅತಿಸಣ್ಣ ರೈತರಬೇಕು. ವಾರ್ಷಿಕ ಆದಾಯ ₹ 98 ಸಾವಿರದ ಮಿತಿಯಲ್ಲಿರಬೇಕು.

ಆಸಕ್ತರು ಮಾರ್ಚ್ 10ರ ಸಂಜೆ 5.30ರೊಳಗಾಗಿ ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ನಿಗಮದ ಜಿಲ್ಲಾ ವ್ಯವಸ್ಥಾಪಕರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಇಲಾಖೆಯ ವೆಬ್‌ಸೈಟ್ ಅಥವಾ ದೂರವಾಣಿ ಸಂಖ್ಯೆ 080-27275114 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಜಿಲ್ಲಾ ವ್ಯವಸ್ಥಾಪಕರ ಕಚೇರಿ ಸ್ಥಳಾಂತರ

ರಾಮನಗರ: ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ರಾಮನಗರ ಜಿಲ್ಲಾ ಕಚೇರಿಯನ್ನು #102, ಮೊದಲನೇ ಮಹಡಿ, 3ನೇ ಕ್ರಾಸ್, 1ನೇ ಬ್ಲಾಕ್, ಉತ್ತರ ಬಡಾವಣೆ, 1ನೇ ಫೇಸ್, ರತ್ನಾಕರ ಬ್ಯಾಂಕ್ ಪಕ್ಕ ಬಿ.ಎಂ. ರಸ್ತೆ, ರಾಮನಗರ– ಈ ವಿಳಾಸಕ್ಕೆ ಸ್ಥಳಾಂತರಿಸಲಾಗಿದೆ.

ಮಾಹಿತಿಗೆ ದೂರವಾಣಿ ಸಂಖ್ಯೆ 080-27275114 ಸಂಪರ್ಕಿಸಬಹುದು ಎಂದು ರಾಮನಗರ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ
ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT