ಶುಕ್ರವಾರ, 22 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಗಮ, ಮಂಡಳಿಗಳಲ್ಲಿ ಶಾಸಕರು–ಕಾರ್ಯಕರ್ತರಿಗೆ ಅವಕಾಶ: ಡಿ.ಕೆ. ಶಿವಕುಮಾರ್

Published 5 ಸೆಪ್ಟೆಂಬರ್ 2023, 12:37 IST
Last Updated 5 ಸೆಪ್ಟೆಂಬರ್ 2023, 12:37 IST
ಅಕ್ಷರ ಗಾತ್ರ

ಕನಕಪುರ : ‘ನಾನು ಮಾತ್ರ ಸಚಿವನಾಗಿ, ಉಳಿದ ಶಾಸಕರಿಗೆ ಅಧಿಕಾರ ಸಿಗದಿದ್ದರೆ ತಪ್ಪಲ್ಲವೇ? ಎಲ್ಲರಿಗೂ ಅವಕಾಶ ಸಿಗುತ್ತದೆ. ಅದಕ್ಕಾಗಿ, ನಿಗಮ ಮತ್ತು ಮಂಡಳಿಗಳಲ್ಲಿ ಶಾಸಕರು ಹಾಗೂ ಕಾರ್ಯಕರ್ತರಿಗೆ ಹೆಚ್ಚಿನ ಅವಕಾಶ ನೀಡಲಾಗುವುದು’ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

‍ಪಟ್ಟಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸುಮಾರು 25 ಶಾಸಕರು ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಕೇಳುತ್ತಿದ್ದು, ಅದರಲ್ಲಿ 15 ಮಂದಿಗೆ ಅವಕಾಶ ನೀಡುತ್ತೇವೆ. ಉಳಿದ ಸ್ಥಾನಗಳನ್ನು ಕಾರ್ಯಕರ್ತರಿಗೆ ಕೊಟ್ಟು, ಎರಡೂವರೆ ವರ್ಷ ಅವಕಾಶ ನೀಡುತ್ತೇವೆ’ ಎಂದರು.

ಜಾಗತಿಕ ಮಟ್ಟದ ಶಿಕ್ಷಣ 

‘ರಾಜ್ಯದಲ್ಲಿ 40 ಸಾವಿರ ಶಿಕ್ಷಕರ ಕೊರತೆ ಇದ್ದು, ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆ ತರಲು ಅನೇಕ ಯೋಜನೆಗಳನ್ನು ಹಾಕಿಕೊಂಡಿದ್ದೇವೆ. ಗ್ರಾಮೀಣ ಸೇರಿದಂತೆ ಎಲ್ಲಾ ಭಾಗದ ಮಕ್ಕಳಿಗೂ ಜಾಗತಿಕ ಮಟ್ಟದ ಶಿಕ್ಷಣ ಸಿಗುವಂತೆ ಮಾಡಲು ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (ಸಿಎಸ್ಆರ್) ಹಣದ ಸದುಪಯೋಗಕ್ಕೆ ಯೋಜನೆ ರೂಪಿಸುತ್ತಿದ್ದೇವೆ. ಸರ್ಕಾರಿ ಶಾಲೆಗಳನ್ನು ದತ್ತು ತೆಗೆದುಕೊಳ್ಳುವಂತೆ, ಪ್ರಮುಖ ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ಪ್ರೇರೆಪಿಸಲಾಗುವುದು’ ಎಂದರು.

‘2–3 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ತಲಾ ಮೂರು ಎಕರೆ ಜಾಗ ಗುರುತಿಸಿ, ಅಲ್ಲಿ ಸಿಬಿಎಸ್‌ಸಿ ಅಥವಾ ಐಸಿಎಸ್‌ಸಿ ಮಾದರಿಯ ಶಾಲೆಯನ್ನು ನಿರ್ಮಿಸಲು ತೀರ್ಮಾನಿಸಲಾಗಿದೆ. ಈ ಕುರಿತು ನೀಲನಕ್ಷೆ ಸಿದ್ದಪಡಿಸಲಾಗಿದೆ. ಈಗಿರುವ ಶಿಕ್ಷಕರಿಗೆ ಜಾಗತಿಕ ಮಟ್ಟದ ಶಿಕ್ಷಣದ ಕುರಿತು ತರಬೇತಿ ನೀಡಲಾಗುವುದು’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT