ಮಾಗಡಿ: ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವಂತಹ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು ಎಂದು ಕನ್ನಡ ಸಹೃದಯ ಬಳಗದ ಅಧ್ಯಕ್ಷ ಡಾ.ಮುನಿರಾಜಪ್ಪ ಆಗ್ರಹಿಸಿದರು.

ಕನ್ನಡ ಸಹೃದಯ ಬಳಗದಿಂದ ನಡೆದ ಖಂಡನಾ ಸಭೆಯಲ್ಲಿ ಅವರು ಮಾತನಾಡಿದರು.

ಸಂವಿಧಾನದ ಆಶಯದಂತೆ ಭಾಷಾವಾರು ಪ್ರಾಂತ್ಯಗಳ ವಿಂಗಡಣೆಗಾಗಿ ಫಜಲ್ ಆಲಿ ಸಮಿತಿ ರಚಿಸಲಾಗಿತ್ತು. ಮಹಾಜನ್ ವರದಿ ಅನ್ವಯ ಬೆಳಗಾವಿ ಕರ್ನಾಟಕಕ್ಕೆ ಸೇರಿದೆ. ಮತಗಳಿಕೆಗಾಗಿ ಮುಖ್ಯಮಂತ್ರಿ ಹುದ್ದೆಯ ಘನತೆ ಮರೆತು ಉದ್ಧಟತನದ ಹೇಳಿಕೆ ನೀಡಬಾರದು ಎಂದರು.

ಸಹೃದಯ ಬಳಗದ ಉಪಾಧ್ಯಕ್ಷ ಡಿ. ರಾಮಚಂದ್ರಯ್ಯ, ಖಜಾಂಚಿ ಎಂ.ಕೆ. ಶಿವಲಿಂಗಯ್ಯ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.