ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೈಗಾರಿಕೆಗಳಿಂದ 35 ಆಮ್ಲಜನಕ ಸಿಲಿಂಡರ್‌: ಕೊರೊನಾ ತಡೆಗೆ ಸಹಾಯ

Last Updated 8 ಮೇ 2021, 3:30 IST
ಅಕ್ಷರ ಗಾತ್ರ

ಕನಕಪುರ: ಆಮ್ಲಜನಕದ ಕೊರತೆ ನೀಗಿಸಲು ಕೈಗಾರಿಕಾ ಕ್ಷೇತ್ರದಲ್ಲಿರುವ ಪ್ಯಾಕ್ಟರಿಗಳ ಮಾಲಿಕರ ಮನವೊಲಿಸಿ 35 ಆಮ್ಲಜನಕ ಸಿಲಿಂಡರ್‌ಗಳನ್ನು ಪಡೆದುಕೊಳ್ಳಲಾಗಿದೆ ಎಂದು ತಹಶೀಲ್ದಾರ್‌ ವಿ.ಆರ್‌.ವಿಶ್ವನಾಥ್‌ ತಿಳಿಸಿದರು.

ತಾಲ್ಲೂಕಿನ ಹಾರೋಹಳ್ಳಿ ಕೈಗಾರಿಕಾ ಕ್ಷೇತ್ರಕ್ಕೆ ಶುಕ್ರವಾರ ಹೋಬಳಿ ಟಾಸ್ಕ್‌ಪೋರ್ಸ್ ತಂಡದೊಂದಿಗೆ ಭೇಟಿ ನೀಡಿ, ಆಮ್ಲಜನಕ ಸಿಲಿಂಡರ್‌ ಬಳಸುವ ಕಂಪನಿಗಳಿಗೆ ಭೇಟಿಯಾಗಿ ಮಾಲೀಕರೊಂದಿಗೆ ಮಾತುಕತೆ ನಡೆಸಿದರು.

ದೇಶದೆಲ್ಲೆಡೆ ಕೊರೊನಾ ಪರಿಸ್ಥಿತಿ ಕೈ ಮೀರುತ್ತಿದೆ. ಬಹುತೇಕ ಜನರಿಗೆ ಆಮ್ಲಜನಕ ಕೊರತೆ ಉಂಟಾಗಿದ್ದು ಅಭಾವ ಸೃಷ್ಠಿಯಾಗುತ್ತಿದೆ. ಸಧ್ಯದ ಪರಿಸ್ಥಿತಿಯಲ್ಲಿ ಸರ್ಕಾರದಿಂದ ಬರುವ ಸಿಲಿಂಡರ್‌‌ ಸಾಕಾಗುತ್ತಿದ್ದರೂ ಮುಂದೆ ಅಭಾವ ಬರುವ ಸಾಧ್ಯತೆಯಿದೆ. ಆ ಕಾರಣದಿಂದ ಕೈಗಾರಿಕೆಗಳಲ್ಲಿ ಬಳಸುವ ಆಮ್ಲಜನಕ ಸಿಲಿಂಡರ್‌ಗಳನ್ನು ಪಡೆಯಲಾಗಿದೆ ಎಂದರು.

ತಾಲ್ಲೂಕಿನಲ್ಲಿ ಕೋವಿಡ್‌ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ನೂರಕ್ಕೂ ಹೆಚ್ಚು ಪ್ರಕರಣಗಳು ಪ್ರತಿದಿನ ಬರುತ್ತಿದ್ದು ಒಬ್ಬ ಕೋವಿಡ್‌ ಸೋಂಕಿತ ವ್ಯಕ್ತಿ ಗುಣವಾಗಲು 14 ದಿನ ಬೇಕಿದೆ. 14 ದಿನಗಳಲ್ಲಿ 2 ಸಾವಿರಕ್ಕೂ ಹೆಚ್ಚು ಸೋಂಕಿತರು ದಾಖಲಾಗುತ್ತಾರೆ. ಇದನ್ನು ತಾಲ್ಲೂಕಿನ ಜನತೆ ಅರ್ಥಮಾಡಿಕೊಳ್ಳಬೇಕೆಂದುತಿಳಿಸಿದರು.

ಸೋಂಕು ನಿಯಂತ್ರಣಕ್ಕೆ ಸರ್ಕಾರ ಅಥವಾ ತಾಲ್ಲೂಕು ಆಡಳಿತ ಪ್ರಯತ್ನಿಸಿದರೆ ಸಾಲದು, ಇದಕ್ಕೆ ತಾಲ್ಲೂಕಿನ ಜನತೆ ಕೈ ಜೋಡಿಸಬೇಕು. ಕೋವಿಡ್‌ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವ ಮೂಲಕ ಸೋಂಕು ತಗುಲದಂತೆ ಮತ್ತು ಬೇರೆಯವರಿಗೆ ಹರಡದಂತೆ ಜಾಗೃತಿವಹಿಸಬೇಕು ಎಂದರು ಮಾಡಿದರು.

ಕೊರೊನಾ ಸೋಂಕು ನಿಯಂತ್ರಿಸಲು ತಾಲ್ಲೂಕು ಆಡಳಿತವು ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ, ನಗರಸಭೆ, ಆರೋಗ್ಯ ಇಲಾಖೆಯೊಂದಿಗೆ ಎಲ್ಲ ಸರ್ಕಾರಿ ಇಲಾಖೆಗಳ ಅಧಿಕಾರಿ, ಸಿಬ್ಬಂದಿ ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಂಡಿದ್ದೇವೆ. ಅಧಿಕಾರಿಗಳ ತಂಡ ಪ್ರತಿದಿನ ಕಾರ್ಯಕ್ರಮಗಳನ್ನು ರೂಪಿಸಿ ಸೋಂಕು ತಡೆಗೆ ಪ್ರಯತ್ನಿಸುತ್ತಿರುವುದಾಗಿ ಹೇಳಿದರು.

ಸಭೆ: ಶುಕ್ರವಾರ ನಗರಸಭೆ ಸಭಾಂಗಣದಲ್ಲಿ ಸದಸ್ಯರ ಸಭೆನಡೆಸಿ ಸೋಂಕು ತಡೆಯ ಬಗ್ಗೆ ತಿಳಿಸಿಕೊಟ್ಟರು. ಸೋಂಕು ತಡೆ ಹೋರಾಟದಲ್ಲಿ ನಗರಸಭೆಯ ಎಲ್ಲಾ ಸದಸ್ಯರು ಪೂರ್ಣ ಪ್ರಮಾಣದಲ್ಲಿ ಸಹಕಾರ ನೀಡಬೇಕು, ತಮ್ಮ ಸಲಹೆ ಸೂಚನೆಗಳನ್ನು ನೀಡಬೇಕೆಂದು ಮನವಿಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT