ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕುದೂರಿನಲ್ಲಿ ಅರೆ ಸೇನಾಪಡೆ ಪಥಸಂಚಲನ

Published 1 ಏಪ್ರಿಲ್ 2024, 6:42 IST
Last Updated 1 ಏಪ್ರಿಲ್ 2024, 6:42 IST
ಅಕ್ಷರ ಗಾತ್ರ

ಕುದೂರು: ಲೋಕಸಭಾ ಚುನಾವಣೆಯನ್ನು ಶಾಂತಿಯುತವಾಗಿ ನಡೆಸಲು ಕುದೂರು ಪೊಲೀಸ್‌ ಹಾಗೂ ಅರೆ ಸೇನಾಪಡೆ ಸಿಬ್ಬಂದಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಭಾನುವಾರ ಪಥಸಂಚಲನ ನಡೆಸಿದರು.

ಮಾಗಡಿ ಡಿವೈಎಸ್ಪಿ ಪ್ರವೀಣ್, ಕುದೂರು ಸರ್ಕಲ್ ಇನ್‌ಸ್ಪೆಕ್ಟರ್‌ ನವೀನ್ ಹಾಗೂ ಅರೆ ಸೇನಾಪಡೆ ಕಾಮಾಂಡರ್‌ ನೇತೃತ್ವದಲ್ಲಿ ನೂರಾರು ಸಿಬ್ಬಂದಿ ಶಸ್ತ್ರ ಸಜ್ಜಿತರಾಗಿ ಪಟ್ಟಣದ ವಿವಿಧ ವೃತ್ತಗಳಲ್ಲಿ ಪಥಸಂಚಲನ ನಡೆಸಿದರು. ಶಾಂತಿಯುತ ಮತದಾನದ ಜಾಗೃತಿ ಮೂಡಿಸಿದರು.

ಪೊಲೀಸ್ ಠಾಣೆಯಿಂದ ಆರಂಭವಾದ ಪಥಸಂಚಲನ ಬಸ್ ನಿಲ್ದಾಣ, ಸಂತೆ ಸರ್ಕಲ್, ಶಿವಗಂಗೆ ವೃತ್ತ, ಕುದೂರಮ್ಮ ದೇವಸ್ಥಾನ, ಬೈಪಾಸ್ ರಸ್ತೆ ಸೇರಿದಂತೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾಗಿತು.

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಭಾನುವಾರ ಕುದೂರು ಪೊಲೀಸರು ಹಾಗೂ ಅರೆ ಸೇನಾಪಡೆ ಯೋಧರಿಂದ ಕುದೂರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪಥಸಂಚಲನ ನಡೆಯಿತು.
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಭಾನುವಾರ ಕುದೂರು ಪೊಲೀಸರು ಹಾಗೂ ಅರೆ ಸೇನಾಪಡೆ ಯೋಧರಿಂದ ಕುದೂರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪಥಸಂಚಲನ ನಡೆಯಿತು.

ಠಾಣೆಯ ಸಬ್ ಇನ್‌ಸ್ಪೆಕ್ಟರ್‌ ಜಗದೀಶ್ ನಾಯಕ್, ರಾಮಕೃಷ್ಣಯ್ಯ, ಕೃಷ್ಣಮೂರ್ತಿ, ಸರ್ದಾರ್, ಶ್ರೀನಿವಾಸ್ ಇತರರಿದ್ದರು.

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಭಾನುವಾರ ಕುದೂರು ಪೊಲೀಸರು ಹಾಗೂ ಅರೆ ಸೇನಾಪಡೆ ಯೋಧರಿಂದ ಕುದೂರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪಥಸಂಚಲನ ನಡೆಯಿತು.
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಭಾನುವಾರ ಕುದೂರು ಪೊಲೀಸರು ಹಾಗೂ ಅರೆ ಸೇನಾಪಡೆ ಯೋಧರಿಂದ ಕುದೂರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪಥಸಂಚಲನ ನಡೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT