ಭಾನುವಾರ, ಏಪ್ರಿಲ್ 5, 2020
19 °C

ಕೆಮ್ಮುತ್ತಿದ್ದ ವ್ಯಕ್ತಿಯನ್ನು ಬಸ್‌ನಿಂದ ಕೆಳಗಿಳಿಸಿದ ಸಹ ಪ್ರಯಾಣಿಕರು !

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಚನ್ನಪಟ್ಟಣ: ಸರ್ಕಾರಿ ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಕೆಮ್ಮುತ್ತಿದ್ದದ್ದನ್ನು ಗಮನಿಸಿದ ಸಹ ಪ್ರಯಾಣಿಕರು ಆಕ್ಷೇಪ ವ್ಯಕ್ತಪಡಿಸಿ ಅವರನ್ನು ಬಲವಂತವಾಗಿ ಕೆಳಗಿಳಿಸಿದ ಘಟನೆ ಇಲ್ಲಿನ ಸರ್ಕಾರಿ ಬಸ್ ನಿಲ್ದಾಣದಲ್ಲಿ ನಡೆದಿದೆ.

ಮೂಲತಃ ನಂಜನಗೂಡಿನವರಾದ ವ್ಯಕ್ತಿ ಮೈಸೂರಿನ ನೆಸ್ಲೆ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಕಾರ್ಯ ನಿಮಿತ್ತ ಅಮೆರಿಕಗೆ ತೆರಳಿದ್ದ ಅವರು ಶನಿವಾರ ಬೆಳಿಗ್ಗೆ ಬೆಂಗಳೂರಿಗೆ ವಾಪಸಾಗಿದ್ದರು. ವಿಮಾನ ನಿಲ್ದಾಣದಲ್ಲಿ ತಪಾಸಣೆ ನಡೆಸಿದ ಸಿಬ್ಬಂದಿ, ಖಾಸಗಿ ವಾಹನ ಮಾಡಿಕೊಂಡು ತೆರಳುವಂತೆ ಸೂಚನೆ ನೀಡಿದ್ದರು.

’ಅವರಿಗೆ ಯಾವುದೇ ಕೊರೊನಾ ವೈರಸ್ ಸೋಂಕು ಇಲ್ಲ. ಅವರ ಕೈಮೇಲೆ ವಿಮಾನ ನಿಲ್ದಾಣ ಅಧಿಕಾರಿಗಳು ಹಾಕಿದ್ದ ಮುದ್ರೆ ನೋಡಿದ ಸಹ ಪ್ರಯಾಣಿಕರು ಭೀತಿಗೊಂಡಿದ್ದರಿಂದ ಈ ಅವಾಂತರ ಸೃಷ್ಟಿಯಾಗಿದೆ. ಅವರನ್ನು ನಂಜನಗೂಡು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಲಾಗಿದೆ‘ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ರಾಜು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು