ಶುಕ್ರವಾರ, 20 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಾಗಡಿ: ಗುಮ್ಮಸಂದ್ರ ರುದ್ರಮುನೀಶ್ವರ ಮಠಕ್ಕೆ ಉತ್ತರಾಧಿಕಾರಿ

ಓಂಕಾರ ಸ್ವಾಮೀಜಿ ಪಟ್ಟಾಧಿಕಾರ ಮಹೋತ್ಸವ
Published : 23 ಆಗಸ್ಟ್ 2024, 7:19 IST
Last Updated : 23 ಆಗಸ್ಟ್ 2024, 7:19 IST
ಫಾಲೋ ಮಾಡಿ
Comments

ಮಾಗಡಿ: ತಾಲ್ಲೂಕಿನ ಗುಮ್ಮಸಂದ್ರ ರುದ್ರಮುನೀಶ್ವರ ಮಠದ ನೂತನ ಉತ್ತರಾಧಿಕಾರಿಯನ್ನಾಗಿ ಓಂಕಾರ ಸ್ವಾಮೀಜಿಯನ್ನು ನೇಮಕ ಮಾಡಲಾಗಿದೆ. 

ವಿವಿಧ ಮಠಾಧೀಶರ ಸಮ್ಮುಖದಲ್ಲಿ ಗುರುವಾರ ಮಠದಲ್ಲಿ ಓಂಕಾರ ಸ್ವಾಮೀಜಿ ಪಟ್ಟಾಧಿಕಾರ ಮಹೋತ್ಸವ ನಡೆಯಿತು. ರುದ್ರಮುನೇಶ್ವರ ಮಠದ ಚಂದ್ರಶೇಖರ ಸ್ವಾಮೀಜಿ ತಮ್ಮ ಉತ್ತರಾಧಿಕಾರಿಯ ಪಟ್ಟಾಭಿಷೇಕ ಮಾಡಿದರು. 

ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ, ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ನೊಣವಿನಕೆರೆ ವೃಷಭ ಶಿವಯೋಗಿಶ್ವರ ಸ್ವಾಮೀಜಿ ಸೇರಿದಂತೆ ನಾಡಿನ ವಿವಿಧ ಮಠಾಧೀಶರು ಭಾಗವಹಿಸಿದ್ದರು.

ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಮಠದ ಕಾರ್ಯಭಾರ ನಿರ್ವಹಿಸಲು ಉತ್ತರಾಧಿಕಾರಿ ನೇಮಕ ಮಾಡುವ ಕುರಿತು ಭಕ್ತರೊಂದಿಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಯಿತು. ಸಿದ್ಧಗಂಗಾ ಮಠಾಧ್ಯಕ್ಷರ ಸಲಹೆ ಮೇರೆಗೆ ಓಂಕಾರ ಸ್ವಾಮೀಜಿಯನ್ನು ಉತ್ತರಾಧಿಕಾರಿ ಆಯ್ಕೆ ಮಾಡಲಾಯಿತು ಎಂದು ರುದ್ರಮುನೇಶ್ವರ ಚಂದ್ರಶೇಖರ ಸ್ವಾಮೀಜಿ ಹೇಳಿದರು.

ಸೂಕ್ತ ಉತ್ತರಾಧಿಕಾರಿಗಾಗಿ ಒಂದು ವರ್ಷದಿಂದ ಹುಡುಕಾಟ ನಡೆದಿತ್ತು. ಕಣ್ಣೂರು ಗ್ರಾಮದ ಸಿದ್ದಲಿಂಗಮೂರ್ತಿ ಮತ್ತು ರೇಣುಕಾ ದಂಪತಿ ಎರಡನೇ ಪುತ್ರ ಸಂದೀಪ್ ದೇವರು ಮಠದ ಉತ್ತರಾಧಿಕಾರಿಯಾಗಲು ಸೂಕ್ತ ಎಂದು ತೀರ್ಮಾನಿಸಿ ಕುಟುಂಬವನ್ನು ಸಂಪರ್ಕಿಸಲಾಯಿತು ಎಂದು ಅವರು ಹೇಳಿದರು.

ಸಿದ್ದಗಂಗಾ ಮಠದಲ್ಲಿ ಎಂಟನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಸಂದೀಪ್ ದೇವರನ್ನು ಮಠದ ಉತ್ತರಾಧಿಕಾರಿಯಾಗಿ ಆಯ್ಕೆ ಮಾಡಲು ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಕೂಡ ಒಪ್ಪಿಗೆ ಸೂಚಿಸಿದರು. ಭಕ್ತರೊಂದಿಗೆ ಚಿರ್ಚಿಸಿ ಉತ್ತರಾಧಿಕಾರಿಯಾಗಿ ಆಯ್ಕೆ ಮಾಡಲಾಯಿತು ಎಂದು ತಿಳಿಸಿದರು.

ನೂತನ ಉತ್ತರಾಧಿಕಾರಿ ಓಂಕಾರ ಸ್ವಾಮೀಜಿ
ನೂತನ ಉತ್ತರಾಧಿಕಾರಿ ಓಂಕಾರ ಸ್ವಾಮೀಜಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT