ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೇತನ ನೀಡಿ: ಆರೋಗ್ಯ ಸಹಾಯಕಿಯರ ಮನವಿ

Last Updated 3 ಏಪ್ರಿಲ್ 2020, 12:09 IST
ಅಕ್ಷರ ಗಾತ್ರ

ಕನಕಪುರ: ಕಳೆದ ನಾಲ್ಕು ತಿಂಗಳ ವೇತನ ಸಂದಾಯವಾಗಿಲ್ಲ. ಕೂಡಲೇ ಸಂಬಳವನ್ನು ನೀಡಬೇಕು ಎಂದು ಆಗ್ರಹಿಸಿ ಆರೋಗ್ಯ ಸಹಾಯಕಿಯರು ತಾಲ್ಲೂಕು ಆರೋಗ್ಯ ಇಲಾಖೆಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ಡಿಸೆಂಬರ್‌ 2019ರಿಂದ ವೇತನವನ್ನು ನೀಡಿಲ್ಲ. ಸಂಬಳವಿಲ್ಲದೆಯೇ ಕೆಲಸ ಮಾಡುತ್ತಿದ್ದೇವೆ. ಲಾಕ್‌ಔಟ್‌ ವೇಳೆಯಲ್ಲೂ ಸೇವೆಯನ್ನು ಮುಂದುವರಿಸಿದ್ದೇವೆ. ಆದರೂ ಸರ್ಕಾರ ನಿರ್ಲಕ್ಷ್ಯ ಮಾಡುತ್ತಿರುವುದು ಸಲ್ಲದು. ಕೂಡಲೇ ಸಂಬಳ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ ತಾಲ್ಲೂಕಿನ 37 ಮಂದಿ ಹಿರಿಯ ಮತ್ತು ಕಿರಿಯ ಆರೋಗ್ಯ ಸಹಾಯಕಿಯರು ಆರೋಗ್ಯಾಧಿಕಾರಿ ಡಾ. ಭುಜಬಲಿ ಅವರಿಗೆ ಮನವಿ ಮಾಡಿದ್ದಾರೆ.

ಮಾರ್ಚ್ ತಿಂಗಳ ಅಂತ್ಯದ ವೇಳೆಗೆ ಸಂಬಳ ಬಿಡುಗಡೆಯಾಗಬಹುದು ಎಂಬ ನಿರೀಕ್ಷೆ ಇತ್ತು. ಈ ತಿಂಗಳಲ್ಲೂ ವೇತನ ಬಿಡುಗಡೆ ಮಾಡಿಲ್ಲ. ಕುಟುಂಬ ನಿರ್ವಹಣೆ ಕಷ್ಟವಾಗಿದೆ. ಶೀಘ್ರ ಮನವಿಗೆ ಸ್ಪಂದಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT