ಶನಿವಾರ, ನವೆಂಬರ್ 28, 2020
25 °C

ಕನಕಪುರ| ವ್ಯಕ್ತಿ ಸಾವು: ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕನಕಪುರ: ತಾಲ್ಲೂಕಿನ ಸಾತನೂರು ಹೋಬಳಿ ಅಚ್ಚಲು ಗೇಟ್‌ನ ರಾಷ್ಟ್ರೀಯ ಹೆದ್ದಾರಿಯನ್ನು ಬೈಕ್‌ನಲ್ಲಿ ದಾಟುವ ವೇಳೆ ಕಾರು ಡಿಕ್ಕಿ ಹೊಡೆದು ತೋಟಳ್ಳಿಯ ಮೂಲೆಮನೆ ಪಾಪಣ್ಣ(63) ಎಂಬುವರು ಶನಿವಾರ ಮೃತಪಟ್ಟಿದ್ದಾರೆ. 

ರಾಷ್ಟ್ರೀಯ ಹೆದ್ದಾರಿ 209ರಲ್ಲಿ ಅಪಘಾತಗಳು ಸಂಭವಿಸುತ್ತಿದ್ದು ಕೂಡಲೇ ರಸ್ತೆ ಉಬ್ಬುಗಳನ್ನು ಹಾಕಿ ಅಪಘಾತಗಳನ್ನು ತಡೆಗಟ್ಟಬೇಕು ಎಂದು ಒತ್ತಾಯಿಸಿ ನಾಗರಿಕರು ಪ್ರತಿಭಟನೆ ನಡೆಸಿದರು.

ಅಪಘಾತವಾಗುತ್ತಿದ್ದಂತೆ ಸುತ್ತಮುತ್ತಲಿನ ಗ್ರಾಮಸ್ಥರು ನೂರಾರು ಸಂಖ್ಯೆಯಲ್ಲಿ ಜಮಾಯಿಸಿದರು. ಮೂರು ದಿನಗಳ ಹಿಂದೆ ಟ್ಯಾಂಕರ್‌ ಹರಿದು ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಅಧಿಕಾರಿಗಳು ಸುರಕ್ಷತಾ ಕ್ರಮವಹಿಸದಿರುವುದೇ ಇದಕ್ಕೆ ಕಾರಣ ಎಂದು ದೂರಿದರು.

ಸ್ಥಳಕ್ಕೆ ಭೇಟಿ ನೀಡಿದ ಸಾತನೂರು ಎಸ್‌.ಐ. ಮುರಳಿ, ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳ ಜೊತೆಗೆ ಮಾತನಾಡಿ ರಸ್ತೆ ಉಬ್ಬುಗಳನ್ನು ಹಾಕಿಸುವ ಬಗ್ಗೆ ಭರವಸೆ ನೀಡಿದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.